ADVERTISEMENT

ಅಪ್ಪುಗೆ ಭಾವಪೂರ್ಣ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 8:13 IST
Last Updated 9 ನವೆಂಬರ್ 2021, 8:13 IST
ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು   

ಚನ್ನಪಟ್ಟಣ: ಹೃದಯಾಘಾತದಿಂದ ನಿಧನರಾದ ನಟ ಪುನೀತ್ ರಾಜ್‌ಕುಮಾರ್ ಅವರ ಪುಣ್ಯತಿಥಿಯನ್ನು ತಾಲ್ಲೂಕಿನ ದಶವಾರ ಗ್ರಾಮದ ಯುವಕರು ಹಾಗೂ ಗ್ರಾಮಸ್ಥರು ಭಾನುವಾರ ಆಚರಿಸುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ನಟನೆ, ಸರಳತೆ, ಆತ್ಮೀಯ ಗುಣಗಳಿಂದ ಅಪ್ಪು ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಅಕಾಲಿಕ ನಿಧನವನ್ನು ಅರಗಿಸಿಕೊಳ್ಳಲು ಅಭಿಮಾನಿಗಳಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕಿದೆ ಎಂದು ಗ್ರಾಮದ ಮುಖಂಡ ಪ್ರಭು ತಿಳಿಸಿದರು.

ಪುನೀತ್ ಭಾವಚಿತ್ರವನ್ನಿಟ್ಟು ಅಪ್ಪುಗೆ ಇಷ್ಟವಾದ ಎಲ್ಲಾ ತರಹದ ತಿಂಡಿ, ತಿನಿಸುಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಲಾಯಿತು. ಬಳಿಕ ಗ್ರಾಮಸ್ಥರಿಗೆ ಅನ್ನ ಸಂತರ್ಪಣೆ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.