ಕುದೂರು: ಪುನೀತ್ ರಾಜ್‌ಕುಮಾರ್ ಅವರ 50ನೇ ಜನ್ಮದಿನಾಚರಣೆ ಅಂಗವಾಗಿ ಕುದೂರು ಬಸ್ ನಿಲ್ದಾಣದ ವೃತ್ತಕ್ಕೆ ಡಾ.ಪುನೀತ್ ರಾಜ್‌ಕುಮಾರ್ ವೃತ್ತ ಎಂದು ನಾಮಕರಣ ಮಾಡಲಾಯಿತು.
ಈ ವೇಳೆ ಕುದೂರು ಗ್ರಾ.ಪಂ.ಸದಸ್ಯ ಕೆ.ಬಿ.ಬಾಲರಾಜು ಮಾತನಾಡಿ, ಅಪ್ಪು ಇಂದಿಗೂ ಅಜರಾಮರ. ಕಡಿಮೆ ವಯಸ್ಸಿನಲ್ಲಿ ಹೆಚ್ಚು ಸಾಮಾಜಿಕ ಸೇವೆ ಸಲ್ಲಿಸುವ ಮೂಲಕ ಯುವಕರಿಗೆ ಮಾದರಿಯಾಗಿದ್ದಾರೆ ಎಂದರು.
ಪುನೀತ್ ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಕಾಣಿಕೆ ನೀಡಿದ್ದಾರೆ. ಅವರು ಚಿತ್ರರಂಗದಲ್ಲಿ ಮಾತ್ರವಲ್ಲದೆ ನಿಜ ಜೀವನದಲ್ಲೂ ನಾಯಕರಾಗಿದ್ದಾರೆ ಎಂದು ನೆನೆದರು.
ಡಾ.ರಾಜ್‌ಕುಮಾರ್ ಮತ್ತು ಡಾ.ಪುನೀತ್ ರಾಜ್‌ಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ನಾಗೇಶ್ ಕೆ.ಎಚ್ ಮಾತನಾಡಿ, ಚಿಕ್ಕ ವಯಸ್ಸಿನಲ್ಲಿಯೇ ಸಮಾಜಮುಖಿ ಕಾರ್ಯಗಳನ್ನು ಮಾಡುವ ಜನಮಾನಸದಲ್ಲಿ ಉಳಿದಿದ್ದಾರೆ. ಅವರ ಆದರ್ಶಗಳು ಎಲ್ಲರೂ ಸ್ಫೂರ್ತಿದಾಯಕ. ಹಾಗಾಗಿ ಅವರ ಜನ್ಮದಿನಾಚರಣೆಯನ್ನು ಎಲ್ಲರೂ ಆಚರಿಸಬೇಕು ಎಂದು ತಿಳಿಸಿದರು.
ಹುಟ್ಟ ಹಬ್ಬದ ಪ್ರಯುಕ್ತ ಸಿಹಿ ವಿತರಿಸಲಾಯಿತು. ಜತೆಗೆ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
ಸುಹೇಲ್, ಟಿ.ಹನುಮಂತರಾಯಪ್ಪ, ರೇಖಾಸೋಮೇಶ್, ರಮ್ಯಜ್ಯೋತಿ, ಗೀರೀಶ್, ಮುನಿರಾಜು, ಜಗದೀಶ್, ಸುರೇಶ್, ಚಂದ್ರಶೇಖರ್, ಶಂಕರ್, ಕೇಶವಮೂರ್ತಿ, ಗೋವಿಂದರಾಜು, ಬಾಬು, ಬಾದೇಗೌಡ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.