ADVERTISEMENT

ರಾಮನಗರದಲ್ಲಿ ದಿನವಿಡೀ ಮಳೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 15:40 IST
Last Updated 2 ಸೆಪ್ಟೆಂಬರ್ 2020, 15:40 IST

ರಾಮನಗರ: ಜಿಲ್ಲೆಯಾದ್ಯಂತ ಮಳೆ ಮುಂದುವರಿದಿದ್ದು, ಬುಧವಾರ ದಿನವಿಡೀ ಜಿಟಿಜಿಟಿ ಮಳೆಯಾಯಿತು.

ರಾಮನಗರದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಡುಗು ಸಹಿತ ವರ್ಷಧಾರೆ ಆರಂಭಗೊಂಡು ಅರ್ಧ ಗಂಟೆಗೂ ಹೆಚ್ಚು ಕಾಲ ಹನಿಯಿತು. ನಂತರದಲ್ಲೂ ಆಗಾಗ್ಗೆ ಮಳೆಯಾಗುತ್ತಲೇ ಇತ್ತು. ಜಿಲ್ಲೆಯಲ್ಲಿ ವ್ಯಾಪಕವಾಗಿ ಬಿತ್ತನೆ ಆಗಿರುವ ರಾಗಿಯು ಆಗಸ್ಟ್‌ ತಿಂಗಳಲ್ಲಿ ಮಳೆಯ ಕೊರತೆಯಿಂದಾಗಿ ಒಣಗುವ ಹಂತಕ್ಕೆ ತಲುಪಿತ್ತು. ಕಳೆದ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿರುವ ಕಾರಣ ಈ ಬೆಳೆಗಳಿಗೆ ಜೀವಕಳೆ ಬಂದಿದೆ.

ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ 20, ಕನಕಪುರದಲ್ಲಿ 10 ಹಾಗೂ ರಾಮನಗರದಲ್ಲಿ 12 ಮಿ.ಮೀ. ಮಳೆ ಪ್ರಮಾಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.