ಹಾರೋಹಳ್ಳಿ: ಸೋಮನಹಳ್ಳಿ ಟೋಲ್ ವ್ಯಾಪ್ತಿಯ ನೆಟ್ಟಿಗೆರೆ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಕೆರೆಯಂತಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೆದ್ದಾರಿಯನ್ನು ನಿರ್ವಹಣೆ ಮಾಡದಿದ್ದರೂ ವಾಹನ ಸವಾರರಿಂದ ಟೋಲ್ ಸುಲಿಗೆ ಮಾಡುತ್ತಿದ್ದಾರೆ ಎಂದು ವಾಹನ ಸವಾರರು ಆರೋಪಿಸಿದ್ದಾರೆ.
ಹೆದ್ದಾರಿಯಲ್ಲಿ ನೀರು ನಿಂತಿದ್ದು, ವಾಹನ ಸವಾರರು ಹರಸಾಹಸ ಪಡುವಂತಾಗಿದೆ. 20 ಮಂದಿ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಈ ಅವಘಡಗಳಿಗೆ ಹೊಣೆ
ಯಾರು? ಈ ಬಗ್ಗೆ ಯಾರೂ ಗಮನಹರಿಸುತ್ತಿಲ್ಲ. ಗೇಟ್ ಬಳಿ ಒಂದು ಕಾಲುವೆಯೂ ನಿರ್ಮಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.