ಕನಕಪುರ: ಗಾಣಿಗ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿರುವುದೇ ಆರ್ಥಿಕವಾಗಿ ಹಿಂದುಳಿಯಲು ಕಾರಣ. ಅದಕ್ಕಾಗಿ ಸಮುದಾಯದ ಜನತೆ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಗಾಣಿಗರ ಸಂಘದ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದರು.
ಗಾಣಿಗರ ಸಂಘ ಮಂಗಳವಾರ ಸಮುದಾಯದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹಿಂದಿನಿಂದಲೂ ಗಾಣಿಗ ಸಮುದಾಯ ಕುಲಕಸುಬು ನಂಬಿಕೊಂಡು ಜೀವನ ನಡೆಸುತ್ತಾ ಬಂದಿದೆ. ಬದಲಾದ ವ್ಯವಸ್ಥೆಗೆ ಸಮುದಾಯವೂ ಬದಲಾಗಬೇಕು. ಆಗ ಮಾತ್ರ ಪ್ರಗತಿ ಹೊಂದಲು ಸಾಧ್ಯ. ಅದಕ್ಕೆ ಮೂಲವಾಗಿ ಶಿಕ್ಷಣ ಬೇಕು. ಶಿಕ್ಷಣಕ್ಕೆ ಸಮುದಾಯ ಆದ್ಯತೆ ನೀಡಬೇಕು ಎಂದರು.
ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘದ ಗೌರವಾಧ್ಯಕ್ಷರಾಗಿದ್ದ ಎಂ.ಶ್ರೀನಿವಾಸ್ ಸ್ಮರಣಾರ್ಥ ಅವರ ಮಗಳು ನಳಿನಿ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದರು.
ಸಂಘದ ಗೌರವಾಧ್ಯಕ್ಷ ಮಂಡಿ ಸುರೇಶ್, ಉಪಾಧ್ಯಕ್ಷ ಮೋಟಪ್ಪ, ನಾಗರಾಜು, ತಮ್ಮಯ್ಯ ಶೆಟ್ಟಿ, ನಾಗಣ್ಣ, ಪ್ರಧಾನ ಕಾರ್ಯದರ್ಶಿ ಲೋಕೇಶ್, ಖಜಾಂಚಿ ಸುರೇಶ್, ಉಪ ಖಜಾಂಚಿ ಚೆನ್ನಕೇಶವ, ಸಹ ಕಾರ್ಯದರ್ಶಿ ರಾಮಕೃಷ್ಣಪ್ಪ, ಸಂಚಾಲಕರಾದ ಕಬ್ಬಾಳಮ್ಮ ನಾಗರಾಜು, ನಂಜುಂಡಪ್ಪ, ಸಂಘಟನಾ ಕಾರ್ಯದರ್ಶಿಗಳಾದ ಶಂಕರ್, ನಾರಾಯಣ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.