ಚನ್ನಪಟ್ಟಣ: ನಗರದ ವೀರಶೈವ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ 15 ಸ್ಥಾನಗಳ ನಿರ್ದೇಶಕರ ಆಯ್ಕೆಗೆ ಜೂನ್ 8ರಂದು ಚುನಾವಣೆ ನಡೆಯಲಿದೆ.
ಮೇ 29ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೇ 31 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜೂನ್ 1ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 2ರಂದು ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ. ಅಂದೇ ಅಭ್ಯರ್ಥಿಗಳಿಗೆ ಚಿಹ್ನೆ ವಿತರಣೆ ನಡೆಯಲಿದೆ.
ಜೂನ್ 8ರಂದು ಕುಡಿನೀರು ಕಟ್ಟೆ ಬಳಿಯ ವಿಶ್ವೇಶ್ವರಯ್ಯ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ಮತದಾನ ನಡೆಯಲಿದೆ. ಸಂಜೆ ಫಲಿತಾಂಶ ಪ್ರಕಟವಾಗಲಿದೆ ಎಂದು ಸಂಘದ ಕಾರ್ಯದರ್ಶಿ ಮಹೇಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.