ಹಾರೋಹಳ್ಳಿ: ತಾಲ್ಲೂಕಿನ ಪಿಚ್ಚನಕೆರೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬುಧವಾರ ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕುಮಾರಸ್ವಾಮಿ ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೆಂಪಲಕ್ಕಯ್ಯ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವರನ್ನು ಚುನಾವಣಾಧಿಕಾರಿ ಉಮೇಶ್ ಅವರು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಅವಿರೋಧವಾಗಿ ಘೋಷಿಸಿದ್ದಾರೆ.
ಈ ವೇಳೆ ಜಗದೀಶ್, ಶ್ರೀನಿವಾಸ್, ಮಲ್ಲೇಶ್, ಸುರೇಶ್, ಮಹೇಶ್, ಚನ್ನಯ್ಯ, ರತ್ನಮ್ಮ, ಸುನೀತಾ, ಪುಟ್ಟ ಮಾದಯ್ಯ, ಅರುಣ್ ಕುಮಾರ್, ರತ್ನಮ್ಮ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.