ADVERTISEMENT

ಬಿಜೆಪಿ ಕಾರ್ಯಕರ್ತರ ಬಂಧನ, ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2024, 5:48 IST
Last Updated 13 ಜುಲೈ 2024, 5:48 IST
ಚನ್ನಪಟ್ಟಣದಿಂದ ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಪುರ ಪೊಲೀಸರು ಬಂಧಿಸಿದರು
ಚನ್ನಪಟ್ಟಣದಿಂದ ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಪುರ ಪೊಲೀಸರು ಬಂಧಿಸಿದರು   

ಚನ್ನಪಟ್ಟಣ: ಮೈಸೂರಿನಲ್ಲಿ ರಾಜ್ಯ ಬಿಜೆಪಿ ಘಟಕ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಪುರ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

ಮೈಸೂರಿಗೆ ತೆರಳುವ ಮೊದಲು ಬಿಜೆಪಿ ಕಾರ್ಯಕರ್ತರು ನಗರದ ಗಾಂಧಿ ಭವನ ಎದುರು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿದರು. ನಂತರ ಮೈಸೂರಿಗೆ ತೆರಳಲು ವಾಹನ ಏರಲು ಮುಂದಾಗುತ್ತಿದ್ದಂತೆ ಪೊಲೀಸರು ಪ್ರತಿಭಟನನಿರತರನ್ನು ವಶಕ್ಕೆ ಪಡೆದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಎಸ್.ರಾಜು, ನಗರ ಘಟಕದ ಅಧ್ಯಕ್ಷ ಶಿವು, ಮುಖಂಡರಾದ ಹುಲುವಾಡಿ ದೇವರಾಜು, ಶಿವಲಿಂಗಯ್ಯ, ಮೈತ್ರಿಗೌಡ, ನಿಂಗೇಗೌಡ, ಮಲ್ಲೇಶ್, ಶಿವಕುಮಾರ್, ಸತೀಶ್, ಆನಂದ್ ಸೇರಿದಂತೆ ಹಲವರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.