ADVERTISEMENT

ಹಾರೋಹಳ್ಳಿ | ಶಾಲೆಗೆ ಹುಸಿ ಬಾಂಬ್ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 14 ಮೇ 2024, 15:27 IST
Last Updated 14 ಮೇ 2024, 15:27 IST
ಕಗ್ಗಲೀಪುರ ಪೊಲೀಸ್ ಠಾಣೆಯ ಸೋಮನಹಳ್ಳಿ ಬಳಿಯ ಎಡಿಫೈ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮಂಗಳವಾರ ಬಾಂಬ್ ನಿಷ್ಕ್ರಿಯ ದಳ ಮತ್ತು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು
ಕಗ್ಗಲೀಪುರ ಪೊಲೀಸ್ ಠಾಣೆಯ ಸೋಮನಹಳ್ಳಿ ಬಳಿಯ ಎಡಿಫೈ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮಂಗಳವಾರ ಬಾಂಬ್ ನಿಷ್ಕ್ರಿಯ ದಳ ಮತ್ತು ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು   

ಹಾರೋಹಳ್ಳಿ: ತಾಲ್ಲೂಕಿನ ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸೋಮನಹಳ್ಳಿ ಬಳಿಯ ಎಡಿಫೈ ಶಾಲೆಗೆ ಸೋಮವಾರ ತಡರಾತ್ರಿ ಬಾಂಬ್ ಬೆದರಿಕೆಯ ಇ– ಮೇಲ್ ಬಂದಿದೆ. 

ಮಂಗಳವಾರ ಬೆಳಗ್ಗೆ ಇ–ಮೇಲ್‌ ನೋಡಿದ ಶಾಲೆಯ ಸಿಬ್ಬಂದಿ ಈ ವಿಷಯವನ್ನು ಆಡಳಿತ ಮಂಡಳಿ ಗಮನಕ್ಕೆ ತಂದಿದೆ. ಶಾಲೆಯ ಆಡಳಿತ ಮಂಡಳಿ ಕಗ್ಗಲೀಪುರ ಪೊಲೀಸ್ ಠಾಣೆಗೆ ದೂರು ನೀಡಿದೆ.

ತಕ್ಷಣ ಬಾಂಬ್ ನಿಷ್ಕ್ರಿಯ ದಳ ಮತ್ತು ರಾಮನಗರ ಎಎಸ್‌ಪಿ ಸುರೇಶ್ ನೇತೃತ್ವದ ತಂಡ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಆದರೆ, ಸ್ಥಳದಲ್ಲಿ ಏನೂ ದೊರೆಯಲಿಲ್ಲ.

ADVERTISEMENT

‘ಇದೊಂದು ಹುಸಿ ಬಾಂಬ್ ಬೆದರಿಕೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಎಲ್ಲಿಂದ ಮೇಲ್ ಮಾಡಲಾಗಿದೆ? ಯಾರು ಮೇಲ್‌ ಕಳಿಸಿದ್ದಾರೆ? ಮುಂತಾದ ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.