ಕುದೂರು: ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಒಬ್ಬ ಮಹಿಳೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ಸೋಲೂರು ಹೋಬಳಿ ಕೆ.ಜಿ ನಗರ ಬಳಿ ನಡೆದ ಅಪಘಾತದಲ್ಲಿ ಸಾಗರ ತಾಲ್ಲೂಕಿನ ಜೋಗ್ ಫಾಲ್ಸ್ ನಿವಾಸಿ ಯಶ್ವಂತ್ (33) ಮೃತಪಟ್ಟಿದ್ಧಾರೆ. ಅವರ ಪತ್ನಿ ಸಹನಾ ಎಂ.ಎನ್ ಗಾಯಗೊಂಡಿದ್ದಾರೆ. ಚನ್ನರಾಯಪಟ್ಟಣದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಂಗಳೂರಿಗೆ ಹೊರಟಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.