ADVERTISEMENT

ರಾಮನಗರ | ಅಪಘಾತ: ಹೂವಿನ ವ್ಯಾಪಾರಿ ಸಾವು

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 19:57 IST
Last Updated 23 ಜುಲೈ 2025, 19:57 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ರಾಮನಗರ: ನಗರದ ಹೊರವಲಯದ ಕೊಂಕಾಣಿದೊಡ್ಡಿ ಬಳಿಯ ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಸುಕಿನಲ್ಲಿ ಸರಕು ಸಾಗಣೆ ವಾಹನವು ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ, ವಾಹನದಲ್ಲಿದ್ದ ಹೂವಿನ ವ್ಯಾಪಾರಿ ಮೃತಪಟ್ಟಿದ್ದಾರೆ.

ADVERTISEMENT

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕಿನ ಬಲ್ಲೇನಹಳ್ಳಿಯ ಸೋಮೇಶ್ (36) ಮೃತರು. ಘಟನೆಯಲ್ಲಿ ವಾಹನ ಚಾಲಕ ರಾಜು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮೇಶ್ ಅವರು ವಾಹನದಲ್ಲಿ ಹೂ ತೆಗೆದುಕೊಂಡು ಬೆಂಗಳೂರಿನ ಕೆ.ಆರ್. ಮಾರುಕಟ್ಟೆಗೆ ಹೊರಟ್ಟಿದ್ದರು. ವೇಗವಾಗಿ ಹೋಗುತ್ತಿದ್ದ ಚಾಲಕ ರಾಜು ಕೊಂಕಾಣಿದೊಡ್ಡಿ ಬಳಿ ಮುಂದಿರುವ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಗುದ್ದಿದ್ದಾನೆ.

ಘಟನೆ ಕುರಿತು ಪ್ರಕರಣ
ದಾಖಲಿಸಿಕೊಳ್ಳಲಾಗಿದೆ ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.