ರಾಮನಗರ : ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯಡಿ ಹೊಸದಾಗಿ ತೆಂಗು ಬೆಳೆ ಬೆಳೆಯಲು ಸಹಾಯಧನ ಸೌಲಭ್ಯವಿದ್ದು, ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಹೆಕ್ಟೇರಿಗೆ ವರ್ಷಕ್ಕೆ ₹26 ಸಾವಿರದಂತೆ ಎರಡು ವರ್ಷಕ್ಕೆ ₹56 ಸಾವಿರ ಸಹಾಯಧನ ನೀಡಲಾಗುತ್ತದೆ. ಹೊಸ ಪ್ರದೇಶದಲ್ಲಿ ಗಿಡಗಳನ್ನು ನೆಟ್ಟರೆ ಮಾತ್ರ ಸಹಾಯಧನಕ್ಕೆ ಪರಿಗಣಿಸಲಾಗುವುದು. ಬದುಗಳ ಅಂಚಿನಲ್ಲಿ ನಾಟಿ ಮಾಡಿದರೆ ಪರಿಗಣಿಸಲಾಗುವುದಿಲ್ಲ.
ಆಸಕ್ತ ರೈತರು ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಜೆರಾಕ್ಸ್, ರಾಷ್ಟ್ರೀಕೃತ ಬ್ಯಾಂಕ್ ಪಾಸ್‌ಪುಸ್ತಕ ಜೆರಾಕ್ಸ್, ತೆಂಗು ಅಭಿವೃದ್ಧಿ ಮಂಡಳಿಯ ಅಧಿಕೃತ ಸಸ್ಯಗಾರದಿಂದ ಸಸಿ ಖರೀದಿಸಿದ ಬಿಲ್ಲುಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ತೆಂಗು ಅಭಿವೃದ್ಧಿ ಮಂಡಳಿಯ ಜಾಲತಾಣದಲ್ಲಿ ಅಥವಾ ಚನ್ನಪಟ್ಟಣ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿ ಅಥವಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಚನ್ನಪಟ್ಟಣ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.