ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಬಾಲಭವನ ಸೊಸೈಟಿಯಲ್ಲಿನ ಮಕ್ಕಳ ಕಾರ್ಯಕ್ರಮ/ಚಟುವಟಿಕೆಗಳನ್ನು ಸುಸೂತ್ರವಾಗಿ ನಡೆಸಲು ಕಾರ್ಯಕ್ರಮ ಸಂಯೋಜಕರು ಹಾಗೂ ಕಚೇರಿ ಸಹಾಯಕರನ್ನು ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಾರ್ಯಕ್ರಮ ಸಂಯೋಜಕರ ಒಂದು ಹುದ್ದೆಗೆ ಯಾವುದೇ ಪದವಿ ಹಾಗೂ ಕಂಪ್ಯೂಟರ್ ಜ್ಞಾನದ ಜೊತೆಗೆ ಸೃಜಾನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳ ಯಾವುದಾದರು ಒಂದು ಕಲಾಕ್ಷೇತ್ರದಲ್ಲಿ ಕೌಶಲ್ಯ ಹೊಂದಿರುವ ಬಗ್ಗೆ ಪ್ರಮಾಣ ಪತ್ರ ಲಗತ್ತಿಸಬೇಕು. ಕಚೇರಿ ಸಹಾಯಕರ ಒಂದು ಹುದ್ದೆಗೆ ಪಿಯುಸಿ ಅಥವಾ ಮೇಲ್ಪಟ್ಟ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಪ್ರಮಾಣಪತ್ರ ಕಡ್ಡಾಯವಾಗಿ ಲಗತ್ತಿಸಬೇಕು.
ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯಿತಿ ಭವನ, 2ನೇ ಮಹಡಿ ಬಿ.ಎಂ. ರಸ್ತೆ, ಬೆಂಗಳೂರು ದಕ್ಷಿಣ ಜಿಲ್ಲೆ. ಈ ಕಚೇರಿಯಲ್ಲಿ ಪಡೆದು ಆಗಸ್ಟ್ 7ರ ಸಂಜೆ 4 ಗಂಟೆಯೊಳಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬೇಕು ಎಂದು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.