
ರಾಮನಗರ: ಕರ್ನಾಟಕ ಬಾಲ ವಿಕಾಸ ಅಕಾಡೆಮಿಯಿಂದ 2024-25 ಹಾಗೂ 2025-26ನೇ ಸಾಲಿನಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ 18 ವರ್ಷದೊಳಗಿನ ಮಕ್ಕಳಿಗೆ ಬಾಲ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಪ್ರಶಸ್ತಿಗೆ ಅರ್ಹರು. ಇಂತಹ ಮಕ್ಕಳು ಅಕಾಡೆಮಿ ಬಾಲ ಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ ವಿವರ ಒಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆ. 20ರೊಳಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ.
ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯಿತಿ, ಬೆಂಗಳೂರು ದಕ್ಷಿಣ ಜಿಲ್ಲೆ. ಈ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಧಾರವಾಡ ಇಲ್ಲಿಗೆ ಸಲ್ಲಿಸಬೇಕು.
ಕೇಂದ್ರ ಕಚೇರಿ ವಿಳಾಸ: ಯೋಜನಾಧಿಕಾರಿ, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ. ಕಾಲೋನಿ, ಲಕಮನಹಳ್ಳಿ, ಧಾರವಾಡ-580004, ಹೆಚ್ಚಿನ ಮಾಹಿತಿಗೆ ದೂ: 0836-2465490, 8050392209, 7204396275, 9448981944 ಸಂಪರ್ಕಿಸಬೇಕು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.