ADVERTISEMENT

ಕಾವೇರಿಗಾಗಿ ರಾಮನಗರ ಬಂದ್: ಸ್ಟಾಲಿನ್‌ ಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2023, 4:02 IST
Last Updated 26 ಸೆಪ್ಟೆಂಬರ್ 2023, 4:02 IST
<div class="paragraphs"><p>ರಾಮನಗರದ ಐಜೂರು ವೃತ್ತದಲ್ಲಿ ಕನ್ನಡ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p></div>

ರಾಮನಗರದ ಐಜೂರು ವೃತ್ತದಲ್ಲಿ ಕನ್ನಡ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

   

ರಾಮನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು ಎಂದು ಆಗ್ರಹಿಸಿ ರಾಮನಗರದಲ್ಲಿ ಮಂಗಳವಾರ ಬಂದ್ ನಡೆಸಿದ ಕನ್ನಡ ಜನಪರ ವೇದಿಕೆಯ ಕಾರ್ಯಕರ್ತರು, ನಗರದ ಐಜೂರು ವೃತ್ತದಲ್ಲಿ ಬೆಳಿಗ್ಗೆ ಪ್ರತಿಭಟನೆ ನಡೆಸಿದರು.

ವೇದಿಕೆ ಅಧ್ಯಕ್ಷ ರಮೇಶ ಗೌಡ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ತಮಿಳುನಾಡು ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸ್ಟಾಲಿನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದ. ಬಾಯಿ ಬಡಿದುಕೊಂಡು ‘ಮತ್ತೆ ಹುಟ್ಟಿ ಬರಬೇಡಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

‘ಸರ್ಕಾರ ಕೂಡಲೇ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ, ರಾಜ್ಯದಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು. ರಾಜ್ಯದ ಜನರ ಹಿತವನ್ನು ಬಲಿ ಕೊಡುವ ಬದಲು, ಕೂಡಲೇ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಬೇಕು. ನಾಡಿನ ಜೀವನದಿ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳಬಾರದು’ ಎಂದು ರಮೇಶ ಗೌಡ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.