ADVERTISEMENT

ಕನಕಪುರ: ಬಿಜೆಪಿ ಅಭ್ಯರ್ಥಿ ಮತಯಾಚನೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2024, 5:19 IST
Last Updated 24 ಏಪ್ರಿಲ್ 2024, 5:19 IST
ಕನಕಪುರ ವಕೀಲರ ಸಂಘದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್‌ ಮಂಗಳವಾರ ಮತ ಯಾಚನೆ ಮಾಡಿದರು
ಕನಕಪುರ ವಕೀಲರ ಸಂಘದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್‌ ಮಂಗಳವಾರ ಮತ ಯಾಚನೆ ಮಾಡಿದರು   

ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರು ಕನಕಪುರ ವಕೀಲರ ಸಂಘಕ್ಕೆ ಮಂಗಳವಾರ ಭೇಟಿ ನೀಡಿ ಮತಯಾಚನೆ ಮಾಡಿದರು.

‘ನಷ್ಟದಲ್ಲಿ ಇದ್ದಂತಹ ಜಯದೇವ ಹೃದ್ರೋಗ ಸಂಸ್ಥೆಯನ್ನು ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮೇಲೆ ನಮ್ಮ ಆಸ್ಪತ್ರೆಯ ವೈದ್ಯರ ತಂಡವು ಅದನ್ನು ಹಂತ ಹಂತವಾಗಿ ಬೆಳೆಸಿ 2000 ಹಾಸಿಗೆಯ ಆಸ್ಪತ್ರೆಯಾಗಿ ಅಭಿವೃದ್ಧಿ ಮಾಡಲಾಗಿದೆ’ ಎಂದರು.

‘ಆಸ್ಪತ್ರೆಯಲ್ಲಿ 75 ಲಕ್ಷ ರೋಗಿಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ, ಬಡವರ ಪರವಾಗಿ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಗುರುತಿಸಿ, ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ ಎಂದು ತಿಳಿಸಿದರು.

ADVERTISEMENT

ನಾನು ಏನೆಂಬುದು, ನನ್ನ ಸೇವೆ ಹೇಗಿದೆ ಎಂಬುದು ನಿಮಗೆ ಗೊತ್ತಿದೆ, ನಾನು ಸೇವಾ ವೃತ್ತಿಯಲ್ಲಿ ಕೆಲಸ ಮಾಡಿದ್ದೇನೆ, ನೀವು ಸೇವಾ ವೃತ್ತಿಯಲ್ಲಿ ಇದ್ದೀರಿ. ಯಾರಿಗೆ ನೀವು ಮತ ಹಾಕಬೇಕು, ಯಾರಿಗೆ ಮತ ನೀಡಬೇಕು ಎಂದು ನೀವೇ ತೀರ್ಮಾನಿಸಿ ಮತ ನೀಡಿ’ ಎಂದರು.

ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಚೆನ್ನೇಗೌಡ ಹಾಗೂ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ನಂಜೇಗೌಡ, ಜೆಡಿಎಸ್‌ ತಾಲ್ಲೂಕು ಅಧ್ಯಕ್ಷ ಬಿ.ನಾಗರಾಜು, ನಗರಸಭೆ ಸದಸ್ಯ ಸ್ಟುಡಿಯೋ ಪುಟ್ಟರಾಜು, ಮಾಜಿ ಸದಸ್ಯ ಪುಟ್ಟರಾಜು, ಜೆಡಿಎಸ್‌ ಮುಖಂಡ ಎ.ಪಿ.ರಂಗನಾಥ್, ಬಿಜೆಪಿ ಮುಖಂಡ ದೇವುರಾವ್ ಜಾದವ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

ಕನಕಪುರ ವಕೀಲರ ಸಂಘದಲ್ಲಿ ಡಾ.ಮಂಜುನಾಥ್‌ ಅವರನ್ನು ವಕೀರಲ ಅಭಿನಂಧಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.