ADVERTISEMENT

ಚನ್ನಪಟ್ಟಣ | 'ಮಾದಕ ವ್ಯಸನ ಸಾಮಾಜಿಕ ದುರಂತ'

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 6:11 IST
Last Updated 11 ಸೆಪ್ಟೆಂಬರ್ 2024, 6:11 IST
ಚನ್ನಪಟ್ಟಣ ತಾಲ್ಲೂಕಿನ ತಾಲ್ಲೂಕಿನ ತಗಚಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು ಸಮಾಜದ ಸತ್ಪ್ರಜೆಗಳಾಗಿ ಬಾಳುವ ಪ್ರಮಾಣ ಸ್ವೀಕರಿಸಿದರು
ಚನ್ನಪಟ್ಟಣ ತಾಲ್ಲೂಕಿನ ತಾಲ್ಲೂಕಿನ ತಗಚಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು ಸಮಾಜದ ಸತ್ಪ್ರಜೆಗಳಾಗಿ ಬಾಳುವ ಪ್ರಮಾಣ ಸ್ವೀಕರಿಸಿದರು   

ಚನ್ನಪಟ್ಟಣ: ಸ್ವಸ್ಥ ಸಮಾಜ ನಿರ್ಮಾಣ ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ರಿವು ಮೂಡಿಸುವ  ಉದ್ದೇಶದೊಂದಿಗೆ ತಾಲ್ಲೂಕಿನ ತಗಚಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಪ್ರೌಢಶಾಲೆ  ಮುಖ್ಯ ಶಿಕ್ಷಕಿ ಮಂಗಳ ಉದ್ಘಾಟಿಸಿದರು. 

ಇಂದಿನ ಯುವಕರು ಮತ್ತು ವಿದ್ಯಾರ್ಥಿಗಳು ಕ್ಷಣಿಕ ಸುಖದ ಭ್ರಮೆಯಲ್ಲಿ ಮಾದಕ ವಸ್ತುಗಳಿಗೆ ದಾಸರಾಗಿ ತಮಗೆ ಅರಿವಿಲ್ಲದಂತೆ ತಮ್ಮ ಬದುಕು ನಾಶ ಮಾಡಿಕೊಳ್ಳುತ್ತಿರುವುದು ಸಾಮಾಜಿಕ ದುರಂತ ಎಂದು ಅವರು ವಿಷಾದಿಸಿದರು.

ಸ್ವಸ್ಥ ಸಮಾಜದ ಬಗ್ಗೆ ಉಪನ್ಯಾಸ ನೀಡಿದ ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ, ವಿದ್ಯಾರ್ಥಿಗಳು ಭೋಗದ ಜೀವನದ ಭ್ರಮೆ ಬಿಟ್ಟು ಸ್ವಸ್ಥ ಮತ್ತು ಸದೃಢ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದರು.

ADVERTISEMENT

ಎಸ್‌ಡಿಎಂಸಿ ಅಧ್ಯಕ್ಷೆ ಮಂಗಳಮ್ಮ, ದರ್ಶನ್, ಪುಷ್ಪಲತಾ, ಜಯರಾಮು, ಆನಂದ್, ಲಕ್ಕಪ್ಪ, ಸುರೇಶ್ ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.