ADVERTISEMENT

ರಾಮನಗರ | ₹22 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸ: ಶಾಸಕ ಇಕ್ಬಾಲ್ ಹುಸೇನ್

ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಹುಸೇನ್ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 2:52 IST
Last Updated 10 ಸೆಪ್ಟೆಂಬರ್ 2025, 2:52 IST
<div class="paragraphs"><p>ರಾಮನಗರ ತಾಲ್ಲೂಕಿನ ಸುಗ್ಗನಹಳ್ಳಿಯಲ್ಲಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ, ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿದರು. </p></div>

ರಾಮನಗರ ತಾಲ್ಲೂಕಿನ ಸುಗ್ಗನಹಳ್ಳಿಯಲ್ಲಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಅವರು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ, ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿದರು.

   

ರಾಮನಗರ: ‘ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದೆರಡು ವರ್ಷದಲ್ಲಿ ಅರ್ಕಾವತಿ ನದಿಗೆ ಅಡ್ಡವಾಗಿ ಸೇತುವೆ ಸೇರಿದಂತೆ ಒಟ್ಟು ₹22.80 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಪಕ್ಕದ ಹರೀಸಂದ್ರದ ಸೇತುವೆ ನಿರ್ಮಾಣಕ್ಕೂ ಯೋಜನೆ ರೂಪಿಸಿದ್ದು, ಅದು ಸಹ ಕಾರ್ಯಗತವಾಗಲಿದೆ’ ಎಂದು ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ಹೇಳಿದರು.

ತಾಲ್ಲೂಕಿನ ಸುಗ್ಗನಹಳ್ಳಿಯಲ್ಲಿ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮಂಗಳವಾರ ₹12.80 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ಹಾಗೂ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಸುಗ್ಗನಹಳ್ಳಿಯ ಅರ್ಕಾವತಿ ಸೇತುವೆಗೆ ನೀರಾವರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ₹10 ಕೋಟಿ ಬಿಡುಗಡೆ ಮಾಡಿದ್ದಾರೆ’ ಎಂದರು.

ADVERTISEMENT

‘ಕ್ಷೇತ್ರದ ಅಭಿವೃದ್ಧಿಗಾಗಿ ನನ್ನ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹30 ಕೋಟಿ ವಿಶೇಷ ಅನುದಾನ ನೀಡಿದ್ದರು. ಇದೀಗ ಮತ್ತೆ ₹50 ಕೋಟಿ ಅನುದಾನ ಬರಲಿದೆ. ಕ್ಷೇತ್ರದಲ್ಲಿ ತುರ್ತಾಗಿ ಆಗಬೇಕಿರುವ ಕೆಲಸಗಳನ್ನು ಆದ್ಯತೆ ಮೇರೆಗೆ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

‘ಕ್ಷೇತ್ರದ ಕಸಬಾ ಮತ್ತು ಕೈಲಾಂಚ ಹೋಬಳಿಗಳ 47 ಕೆರೆಗಳನ್ನು ತುಂಬಿಸಲು ₹108 ಕೋಟಿ ಅನುದಾನ ಸಿಕ್ಕಿದೆ. ಮಂಚನಬೆಲೆ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಸರಾಗವಾಗಿ ಹರಿಯಲು ನಾಲೆಗಳ ಪುನಶ್ಚೇತನ ಮಾಡುವ ಅಗತ್ಯವಿದೆ. ಈಗಾಗಲೇ ಅಧಿಕಾರಿಗಳು ಸರ್ವೆ ನಡೆಸಿದ್ದು, ಪುನಶ್ಚೇತನಕ್ಕೆ ₹70 ಕೋಟಿ ಮೊತ್ತದ ಡಿಪಿಆರ್ ಸಿದ್ದಪಡಿಸಿದ್ದಾರೆ. ಅನುದಾನಕ್ಕೆ ಡಿಸಿಎಂ ಅವರ ಬಳಿ ಚರ್ಚಿಸಲಾಗುವುದು’ ಎಂದರು.

‘ರಾಮನಗರವು ಪುಣ್ಯಭೂಮಿಯಾಗಿದೆ. ದೇಶಕ್ಕೆ ಪ್ರಧಾನಮಂತ್ರಿ ಹಾಗೂ ರಾಜ್ಯಕ್ಕೆ ಮುಖ್ಯಮಂತ್ರಿಗಳನ್ನು ಕೊಟ್ಟಂತಹ ವಿಶೇಷ ಶಕ್ತಿಯನ್ನು ಹೊಂದಿದೆ. ಆದರೆ, ಕ್ಷೇತ್ರವು ಹಲವು ವರ್ಷಗಳಿಂದ ಅಭಿವೃದ್ದಿಯಲ್ಲಿ ಹಿಂದುಳಿದಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಡಿ.ಕೆ. ಶಿವಕುಮಾರ್ ಸಹಕಾರದಲ್ಲಿ ಅಭಿವೃದ್ಧಿ ವೇಗ ನೀಡಲಾಗಿದೆ’ ಎಂದು ತಿಳಿಸಿದರು.

‘ವಸತಿ, ನೀರಾವರಿ, ಶಾಲಾ-ಕಾಲೇಜು, ಅಂಗನವಾಡಿ, ಸಮುದಾಯ ಭವನ, ಬಸ್ ತಂಗುದಾಣ, ರಸ್ತೆ, ಚರಂಡಿ ನಿರ್ಮಾಣ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಮಾಡಲಾಗುತ್ತಿದೆ. ಇದೀಗ ನಿಧಾನವಾಗಿ ಜಿಲ್ಲಾ ಕೇಂದ್ರವಾದ ರಾಮನಗರದ ಚಹರೆ ಬದಲಾಗುತ್ತಿದೆ’ ಎಂದು ಹೇಳಿದರು.

ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಚ್.ರಾಜು, ರಾಮನಗರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ. ಚೇತನ್‌ಕುಮಾರ್, ಮಾಜಿ ಅಧ್ಯಕ್ಷ ಸಿಎನ್‌ಆರ್ ವೆಂಕಟೇಶ್, ಗ್ರಾಮ ಪಂಚಾಯಯಿತಿ ಅಧ್ಯಕ್ಷೆ ಅರ್ಪಿತಾ ಹರೀಶ್, ಉಪಾಧ್ಯಕ್ಷ ಗೋವಿಂದರಾಜು, ಸದಸ್ಯರಾದ ಚಿಕ್ಕಸ್ವಾಮಿ, ಕೆಡಿಪಿ ಸದಸ್ಯ ಮುಕುಂದ, ಗುತ್ತಿಗೆದಾರರಾದ ವಾಸು, ಗೋವಿಂದು, ಮುಖಂಡರಾದ ಸಿ.ರಾಮಯ್ಯ, ಉಮಾಶಂಕರ್, ಆಂಜನಪ್ಪ, ಚಂದ್ರು, ಕಗ್ಗಲ್ಲಯ್ಯ, ವೆಂಕಟಪ್ಪ, ರವಿ, ಗುರುಪ್ರಸಾದ್, ಲಕ್ಕಸಂದ್ರಶಿವಣ್ಣ, ದಯಾನಿಧಿ, ರಾಮಕೃಷ್ಣಯ್ಯ, ತಾ.ಪಂ. ಇಒ ಪೂರ್ಣಿಮಾ, ಪಿಡಿಒ ಸುರೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಹೊಸ ಬಸ್ ನಿಲ್ದಾಣ; ನಗರ ಸಂಚಾರಕ್ಕೆ 3 ಬಸ್ ‘ರಾಮನಗರದ ಕೈಗಾರಿಕಾ ಪ್ರದೇಶದ ಭಾಗದಲ್ಲಿ ಸುಸಜ್ಜಿತ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಅದಕ್ಕಾಗಿ ಒಂದು ಎಕರೆ ಗುರುತಿಸುವಂತೆ ಸಾರಿಗೆ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೂಚಿಸಿದ್ದಾರೆ. ಜೊತೆಗೆ ಈಗಿರುವ ಹಳೆ ಬಸ್ ನಿಲ್ದಾಣವನ್ನು ₹2 ಕೋಟಿ ವೆಚ್ಚದಲ್ಲಿ ನವೀಕರಣ ಮಾಡಲಾಗುವುದು. ನಗರ ಬೆಳೆದಂತೆ ಜನಸಂಖ್ಯೆ ಸಹ ಹೆಚ್ಚಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕರು ವ್ಯಾಪಾರಸ್ಥರು ಸಂಚಾರಕ್ಕಾಗಿ ಆಟೋಗಳನ್ನು ಅವಲಂಬಿಸಿದ್ದರು. ಅವರಿಗೆ ಸುಗಮ ಸಾರಿಗೆ ಸೌಲಭ್ಯ ಕಲ್ಪಿಸಲು ಜಿಲ್ಲೆಯ ನಗರ ವ್ಯಾಪ್ತಿಯಲ್ಲಿ ಮೂರು ಮಿನಿ ಬಸ್ಸುಗಳು ಸಂಚಾರ ಇನ್ನೆರಡು ದಿನಗಳಲ್ಲಿ ಸಂಚಾರ ಮಾಡಲಿವೆ’ ಎಂದು ಹುಸೇನ್ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.