
ಬಿಲ್ಲಕೆಂಪನಹಳ್ಳಿಯ ರೇವಣ್ಣ
ರಾಮನಗರ: ತಾಲ್ಲೂಕಿನ ಅವ್ವೇರಹಳ್ಳಿಯಲ್ಲಿರುವ ರೇವಣಸಿದ್ದೇಶ್ವರ ಬೆಟ್ಟ ಹತ್ತುತ್ತಿದ್ದ ಭಕ್ತರೊಬ್ಬರು ಕಾಲುಜಾರಿ ಕೆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಬಿಡದಿ ಹೋಬಳಿಯ ಬಿಲ್ಲಕೆಂಪನಹಳ್ಳಿಯ ರೇವಣ್ಣ (65) ಮೃತರು.
ಬಿಎಂಟಿಸಿಯ ನಿವೃತ್ತ ನೌಕರರಾದ ರೇವಣ್ಣ ಅವರು, ತಮ್ಮ ಮನೆದೇವರಾದ ರೇವಣಸಿದ್ದೇಶ್ವರ ಸ್ವಾಮಿಯ ದರ್ಶನ ಪಡೆಯಲು ಬೆಳಿಗ್ಗೆ 8.30ರ ಸುಮಾರಿಗೆ ಸಹೋದರನೊಂದಿಗೆ ಬೆಟ್ಟಕ್ಕೆ ಬಂದಿದ್ದರು. ದೇವರ ದರ್ಶನಕ್ಕಾಗಿ ಬೆಟ್ಟ ಹತ್ತುತ್ತಿದ್ದ ಅವರು ಕಾಲುಜಾರಿ ಕೆಳಕ್ಕೆ ಬಿದ್ದರು. ಮೇಲಿಂದ ಕೆಳಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದರು.
ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗುವುದು ಎಂದು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.