ADVERTISEMENT

ರಾಮನಗರ: ವಕೀಲರ ವಿರುದ್ಧ ಎಫ್ಐಆರ್‌ಗೆ ದಲಿತ ಸಂಘಟನೆಗಳ ಗಡುವು

ಧರಣಿನಿರತ ವಕೀಲರು, ಪಿಎಸ್ಐ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟದಿಂದ ತಮಟೆ ಚಳವಳಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2024, 12:06 IST
Last Updated 20 ಫೆಬ್ರುವರಿ 2024, 12:06 IST
   

ರಾಮನಗರ: ಜಿಲ್ಲಾ ವಕೀಲರ ಸಂಘಕ್ಕೆ ಭೇಟಿ ನೀಡಿದ ದಲಿತ ಮುಖಂಡರಿಗೆ ವಕೀಲರು ಜಾತಿ ‌ನಿಂದನೆ ಮಾಡಿ ಅವಮಾನಿಸಿದ್ದಾರೆ ಎಂದು ಆರೋಪಿಸಿ, ನಗರದಲ್ಲಿ ಮಂಗಳವಾರ ತಮಟೆ ಚಳವಳಿ ನಡೆಸಿರುವ ದಲಿತ ಸಂಘಟನೆಗಳ ಒಕ್ಕೂಟವು, ವಕೀಲರ ವಿರುದ್ಧ ನೀಡಿರುವ ಜಾತಿದಂದನೆ ದೂರಿನ ಮೇರೆಗೆ ಎಫ್ಐಆರ್ ದಾಖಲಿಸುವಂತೆ ಸಂಜೆ 5.30ರವರೆಗೆ ಗಡುವು ನೀಡಿದೆ.

ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ದಲಿತ ಸಂಘಟನೆಗಳ ಕಾರ್ಯಕರ್ತರು ನಗರದ ಐಜೂರು ವೃತ್ತದಲ್ಲಿ ಜಮಾಯಿಸಿ, ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದ ಮೂರ್ತಿ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ವಿ. ಸುರೇಶ್ ಅವರಿಗೆ ತಕ್ಷಣ ಪ್ರಕರಣ ದಾಖಲಿಸುವಂತೆ ಮನವಿ ಸಲ್ಲಿಸಿದರು.

ಸಂಜೆ 5.30ರೊಳಗೆ ಎಫ್ಐಆರ್ ದಾಖಲಿಸದಿದ್ದರೆ, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಾವು ಸಹ ಅಹೋರಾತ್ರಿ ಅರೆ ಬೆತ್ತಲೆ ಧರಣಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.