
ಚನ್ನಪಟ್ಟಣ: ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಆಯತಪ್ಪಿ ಬೈಕ್‌ನಿಂದ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದ ಲಕ್ಷ್ಮಣ್ (50) ಮೃತಪಟ್ಟವರು.
ಕಳೆದ ಒಂದೂವರೆ ವರ್ಷದಿಂದ ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಠಾಣೆ ಕರ್ತವ್ಯಕ್ಕೆ ಹಾಜರಾಗಲು ಇವರು ಸಮವಸ್ತ್ರ ಧರಿಸಿ ಮನೆಯಿಂದ ಬೈಕ್‌ನಲ್ಲಿ ಹೊರಟಿದ್ದರು. ಆಗ ಆಯತಪ್ಪಿ ಕೆರೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಬೆಳಗ್ಗೆ ನೀರಿನಲ್ಲಿ ಮೃತದೇಹ ತೇಲುತ್ತಿದ್ದನ್ನು ಗಮನಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಗ್ರಾಮಾಂತರ ಪೊಲೀಸರು ಮೃತದೇಹವನ್ನು ಕೆರೆಯಿಂದ ಹೊರತೆಗೆದು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು. ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.