ADVERTISEMENT

ರಾಮನಗರ: ಮನೆ ಪೂರ್ಣಗೊಳಿಸಲು ಗಡುವು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2025, 2:36 IST
Last Updated 3 ಸೆಪ್ಟೆಂಬರ್ 2025, 2:36 IST
ಮನೆ
ಮನೆ   

Deadline to finish home construction

ರಾಮನಗರ: ಇಲ್ಲಿನ ನಗರಸಭೆ ವತಿಯಿಂದ 2010-11ರಿಂದ 2021-22ನೇ ಸಾಲಿನವರೆಗೆ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ (ವಾಜಪೇಯಿ ನಗರ ವಸತಿ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ನಿವಾಸ್ ಯೋಜನೆ, ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆ ಹಾಗೂ ಪ್ರಧಾನಮಂತ್ರಿ ಅವಾಸ್ ಯೋಜನೆ) ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಬೇಕಾಗಿರುತ್ತದೆ.

ಈಗಾಗಲೇ ವಿವಿಧ ವಸತಿ ಯೋಜನೆಯಡಿ ಆಯ್ಕೆಯಾಗಿ ಮನೆಗಳು ಅಪೂರ್ಣಗೊಂಡಿರುವ ಫಲಾನುಭವಿಗಳಿಗೆ ನೋಟೀಸ್ ನೀಡಲಾಗಿದೆ. ಕೆಲವು ಫಲಾನುಭವಿಗಳು ನೋಟೀಸ್ ಸ್ವೀಕರಿಸದಿರುವುದು ಕಂಡುಬಂದಿರುತ್ತದೆ. ಜೊತೆಗೆ ಪ್ರಸ್ತುತ ವಿಳಾಸದಲ್ಲಿ ಸಂಪರ್ಕಕ್ಕೆ ಸಿಗದೇ ಇರುವ ಕಾರಣ ನೋಟೀಸ್ ಜಾರಿ ಮಾಡಲು ಸಾಧ್ಯವಾಗಿರುವುದಿಲ್ಲ.

ADVERTISEMENT

ಹಾಗಾಗಿ, ತಕ್ಷಣ ನಗರಸಭಾ ಕಾರ್ಯಾಲಯಕ್ಕೆ ಭೇಟಿ ನೀಡಿ ಸೂಕ್ತ ಮಾಹಿತಿಯನ್ನು ನೀಡಬೇಕು. ಒಂದು ತಿಂಗಳ ಒಳಗಾಗಿ ಕಟ್ಟಡವನ್ನು ಪೂರ್ಣಗೊಳಿಸಲು ಮತ್ತೊಮ್ಮೆ ತಿಳಿಸಲಾಗಿದೆ. ತಪ್ಪಿದಲ್ಲಿ ಸರ್ಕಾರದ ನಿಯಮದಂತೆ ಕ್ರಮಕೈಗೊಳ್ಳಲಾಗುವುದು ಎಂದು ರಾಮನಗರ ನಗರಸಭೆಯ ಪೌರಾಯುಕ್ತ ಡಾ. ಜಯಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.