ಕನಕಪುರ: ‘ನಗರದಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸಿಕೊಡಬೇಕು’ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದ ಸ್ವಾಮೀಜಿ ಅವರಿಗೆ ಒಕ್ಕಲಿಗ ಸಮುದಾಯದ ಮುಖಂಡರು ಮನವಿ ಮಾಡಿದರು.
ತಾಲ್ಲೂಕಿನ ಶಿವನಾಂಕರೇಶ್ವರ ದೇವಾಲಯದಲ್ಲಿ ಭಾನುವಾರ ಆಷಾಢ ಮಾಸ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸ್ವಾಮೀಜಿ ಆಗಮಿಸಿದ್ದ ವೇಳೆ ಮನವಿ ಸಲ್ಲಿಸಲಾಯಿತು.
‘ನಗರದಲ್ಲಿ ಒಕ್ಕಲಿಗರ ಸಂಘಕ್ಕೆ ಸೇರಿದ ಎರಡು ಎಕರೆಯಷ್ಟು ಭೂಮಿ ಇದೆ. ಅಲ್ಲಿ ಭವನ ನಿರ್ಮಿಸಿಕೊಡಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯ, ಬಿಜೆಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ ಕೋರಿದರು.
ಸ್ಥಳ ಪರಿಶೀಲಿಸಿ, ಸಮುದಾಯ ಭವನ ನಿರ್ಮಿಸಿಕೊಡುವುದಾಗಿ ಸ್ವಾಮೀಜಿ ಭರವಸೆ ನೀಡಿದರು.
ಆದಿಚುಂಚನಗಿರಿ ಶಾಖಾ ಮಠದ ಅನ್ನದಾನನಾಥ ಸ್ವಾಮೀಜಿ, ಸಮುದಾಯದ ಮುಖಂಡರಾದ ಸಂಪತ್ ಕುಮಾರ್, ಬಸ್ ಸಿದ್ದರಾಜು, ಭಾನುಪ್ರಕಾಶ್, ಚೀರಣಕುಪ್ಪೆ ರಾಜೇಶ್, ಹರೀಶ್, ಚಿಕ್ಕೆಂಪೇಗೌಡ ಶಿವರಾಜು, ನಾಗರಾಜು ಅನೇಕರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.