ADVERTISEMENT

ಕನಕಪುರ | ‘ಸಮಯಕ್ಕೆ ಬೆಲೆ ಕೊಟ್ಟರೆ ನಮಗೂ ಬೆಲೆ’

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 6:12 IST
Last Updated 11 ಸೆಪ್ಟೆಂಬರ್ 2024, 6:12 IST
ಕನಕಪುರ ಪದವಿ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಧಾನ ಪರಿಷತ್‌ ಸದಸ್ಯ ರಾಮೋಜಿಗೌಡ ಉದ್ಘಾಟಿಸಿದರು.
ಕನಕಪುರ ಪದವಿ ಕಾಲೇಜಿನಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿಧಾನ ಪರಿಷತ್‌ ಸದಸ್ಯ ರಾಮೋಜಿಗೌಡ ಉದ್ಘಾಟಿಸಿದರು.   

ಕನಕಪುರ: ಸಮಯ ಯಾರನ್ನೂ ಕಾಯುವುದಿಲ್ಲ. ಅದಕ್ಕೆ ಅದರದೇ ಆದ ಮಹತ್ವವಿದೆ. ವಿದ್ಯಾರ್ಥಿಗಳು ಸಮಯದ ಮಹತ್ವ ಅರಿತರೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದು ವಿಧಾನ ಪರಿಷತ್ ಸದಸ್ಯ ರಾಮೋಜಿಗೌಡ ಹೇಳಿದರು.

ಇಲ್ಲಿನ ರೂರಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದ ಸಮಯವನ್ನು ಸರಿಯಾದ ರೀತಿಯಲ್ಲಿ ಉತ್ತಮ ಜೀವನ ರೂಪಿಸಲು ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ರೂರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಎಚ್.ಕೆ.ಶ್ರೀಕಂಠ ಮಾತನಾಡಿದರು. ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ADVERTISEMENT

ಆರ್ ಇ ಎಸ್ ಉಪಾಧ್ಯಕ್ಷೆ ರಂಗನಾಯಕ್ಕಮ್ಮ, ಕಾರ್ಯದರ್ಶಿ ಪುಟ್ಟಸ್ವಾಮಿ, ನಿರ್ದೇಶಕರಾದ ಮಂಜುನಾಥ್, ಸೂರ್ಯನಾರಾಯಣಗೌಡ, ಕೆ.ಜಿ.ತಿಮ್ಮಪ್ಪ, ಎಂ.ಎಲ್.ಶಿವಕುಮಾರ್, ಕೆ.ಬಿ.ನಾಗರಾಜ್, ಹೊಂಬಾಳೆಗೌಡ, ಗವಿಗೌಡ, ಮಲ್ಲೇಶಯ, ಪ್ರಾಂಶುಪಾಲ ರುದ್ರೇಶ್,  ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.