ಕನಕಪುರ: ಕಾಡಾನೆ ತುಳಿತದಿಂದ ಈಚೆಗೆ ಮೃತಪಟ್ಟ ಗಟ್ಟಿಗುಂದ ಗ್ರಾಮದ ರೈತ ಸುರೇಶ್ ಮನೆಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಭಾನುವಾರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮೃತರ ಕುಟುಂಬದವರಿಗೆ ಸಾಂತ್ವನ ತಿಳಿಸಿದ ಸುರೇಶ್, ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.
ಮನುಷ್ಯರ ನಿರಂತರ ಮೇಲೆ ದಾಳಿ ಮಾಡುತ್ತಿರುವ ಕಾಡಾನೆಯನ್ನು ಸೆರೆ ಹಿಡಿದು ಬೇರೆಡೆಗೆ ಸ್ಥಳಾಂತರಿಸುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚಿಸಿದರು. ಅರಣ್ಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.