
ಕನಕಪುರ: ಇಟ್ಟಿಗೆ ಕಾರ್ಖಾನೆಯಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪದಡಿ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ತಾಲ್ಲೂಕಿನ ಸಾತನೂರು ಹೋಬಳಿ ಹರಿಹರ ಸೋಲಿಗೇರಿ ರಸ್ತೆಯ ಕೆರೆ ಬಳಿಯ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಆರೋಪದಡಿ ಇಟ್ಟಿಗೆ ಫ್ಯಾಕ್ಟರಿ ಮಾಲೀಕ ನಾಗೇಶ್ ಮತ್ತು ಅಲ್ಲಿ ಕೆಲಸ ಮಾಡುತ್ತಿದ್ದ ಭೋಜ ಅಲಿಯಾಸ್ ಈರೇಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.
ರೀಫಿಲ್ಲಿಂಗ್ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆ ಆಹಾರ ಇಲಾಖೆಯ ಆಹಾರ ನಿರೀಕ್ಷಕ ಮನೋಹರ್ ದಾಳಿ ನಡೆಸಿದ್ದರು. ಈ ವೇಳೆ 22 ಸಿಲಿಂಡರ್ ಹಾಗೂ ಒಂದು ಟೆಂಪೊ ವಶಕ್ಕೆ ಪಡೆಯಲಾಗಿದೆ. ಸಾತನೂರು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.