ADVERTISEMENT

ರಾಮನಗರ | ನಾಡು–ನುಡಿ ಕಟ್ಟಿದವರ ಸ್ಮರಿಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 5:00 IST
Last Updated 1 ಡಿಸೆಂಬರ್ 2025, 5:00 IST
<div class="paragraphs"><p>ರಾಮನಗರದ ವಿಜಯನಗರ ಡಾ. ರಾಜ್‍ಕುಮಾರ್ ಮುಖ್ಯರಸ್ತೆಯಲ್ಲಿ ಗೆಳೆಯರ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ&nbsp;ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಮಾತನಾಡಿದರು.&nbsp;</p></div>

ರಾಮನಗರದ ವಿಜಯನಗರ ಡಾ. ರಾಜ್‍ಕುಮಾರ್ ಮುಖ್ಯರಸ್ತೆಯಲ್ಲಿ ಗೆಳೆಯರ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಮಾತನಾಡಿದರು. 

   

ರಾಮನಗರ: ‘ಕನ್ನಡ ರಾಜ್ಯೋತ್ಸವವು ಕೇವಲ ಒಂದು ದಿನ ಆಚರಣೆಗಷ್ಟೇ ಸೀಮಿತವಾಗಬಾರದು. ಕನ್ನಡ ನಾಡು–ನುಡಿ, ಕಲೆ ಹಾಗೂ ಸಂಸ್ಕೃತಿಗೆ ಕೊಡುಗೆ ನೀಡಿದವರನ್ನು ಸ್ಮರಿಸುವ ಹಾಗೂ ಅವರ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು’ ಎಂದು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ಶಶಿ ಹೇಳಿದರು.

ನಗರದ ವಿಜಯನಗರ ಡಾ. ರಾಜ್‍ಕುಮಾರ್ ಮುಖ್ಯರಸ್ತೆಯಲ್ಲಿ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕನ್ನಡ ರಾಜ್ಯೋತ್ಸವವು ನಮ್ಮ ನಾಡಿನ ಪರಂಪರೆ ಮತ್ತು ಸಂಸ್ಕತಿ ಬಗ್ಗೆ ಮುಂದಿನ ಪೀಳಿಗೆಗೆ ಅಭಿಮಾನ ಮೂಡಿಸುವ ಕೆಲಸವನ್ನು ಮಾಡುತ್ತಿದೆ ಎಂಬುದರಲ್ಲಿ ಅನುಮಾನವಿಲ್ಲ. ಉತ್ಸವದ ಜೊತೆಗೆ ಭಾಷಾ ಜಾಗೃತಿಯೂ ಸದಾ ಇರಬೇಕು’ ಎಂದರು.

ADVERTISEMENT

‘ಪ್ರತಿಯೊಬ್ಬ ಮಾತೃಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಬಳಕೆಗೆ ಹಿಂಜರಿಕೆ ಮಾಡಿಕೊಳ್ಳಬಾರದು. ನಮ್ಮ ಸಾಹಿತ್ಯ, ಕಲೆ, ಪರಂಪರೆಯ ಕೀರ್ತಿಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವ ಕೆಲಸವಾಗಬೇಕು. ಕನ್ನಡವು ನಮ್ಮ ಅಸ್ಮಿತೆ. ಅದನ್ನು ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ‘ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭುವನೇಶ್ವರಿ ಚಿತ್ರಕ್ಕೆ ಪೂಜೆ ಸಲ್ಲಿಸಿದ ಶಶಿ ಅವರು, ನಂತರ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಿದರುು. ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ದಲಿತ ಸಂಘಟನೆಗಳ ಒಕ್ಕೂಟದ ಜಿಲಾಧ್ಯಕ್ಷ ಶಿವಕುಮಾರಸ್ವಾಮಿ, ಮುಖಂಡ ಶಿವಶಂಕರ್, ಟಿಎಪಿಸಿಎಂಎಸ್ ಅಧ್ಯಕ್ಷ ದೊಡ್ಡಿ ಸುರೇಶ್, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಪ್ರವೀಣ್, ಗೆಳೆಯ ಬಳಗದ ಹಾಲಿನ ಚಂದ್ರು, ಕಿರಣ್, ರವಿತೇಜ, ವಿಜಯ್, ಹನುಮಂತ, ಮಂಜು, ಸಂಜೀವ್, ಮಾದೇಶ್, ಪ್ರಜ್ವಲ್, ಕಬಡ್ಡಿ ವಿಜಿ, ಲಿಖಿತ್, ಪ್ರಶಾಂತ್, ಚಿನ್ನು, ಚಂದ್ರ, ಪವನ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.