ADVERTISEMENT

ರಾಮನಗರ ಕಟ್ಟೆಯ ಮಣ್ಣು ಇಟ್ಟಿಗೆ ಕಾರ್ಖಾನೆಗೆ: ಆರೋಪ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 12:42 IST
Last Updated 10 ಜೂನ್ 2020, 12:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಸೋಲೂರು(ಮಾಗಡಿ): ತಾಲ್ಲೂಕಿನಗುಡೇಮಾರನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ತಾಂಡೇನಪುರದ ಕಟ್ಟೆಯಲ್ಲಿ ಹೂಳು ತೆಗೆಯುವ ನೆಪದಲ್ಲಿ ಮಣ್ಣನ್ನು ಇಟ್ಟಿಗೆ ಕಾರ್ಖಾನೆಗೆ ಸಾಗಿಸುತ್ತಿದ್ದಾರೆ. ಈ ಮೂಲಕ ಖಾಸಗಿಯವರ ಜೇಬು ತುಂಬಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋ‍ಪಿಸಿದ್ದಾರೆ.

ನರೇಗಾ ಯೋಜನೆಯಡಿ ಜೆಸಿಬಿ ಬಳಸಿ ಕಟ್ಟೆಯ ಹೂಳೆತ್ತುವ ಕಾಮಗಾರಿ ನಡೆದಿದೆ. ದುರಸ್ತಿ ನೆಪದಲ್ಲಿ ಮಳೆಗಾಲದಲ್ಲಿ ಕಟ್ಟೆಯ ಮಣ್ಣನ್ನು ಇಟ್ಟಿಗೆ ಕಾರ್ಖಾನೆಗೆ ಸಾಗಿಸುತ್ತಿದ್ದಾರೆ. ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಂದ ಕೆಲಸ ಮಾಡಿಸಬೇಕಿತ್ತು. ಆದರೆ, ಅಧಿಕಾರಿಗಳು ಜೆಸಿಬಿ ಬಳಸಿ ಗ್ರಾಮಸ್ಥರಿಗೆ ಅನ್ಯಾಯ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಗಾ ಯೋಜನೆಯ ಅಧಿಕಾರಿ ಮತ್ತು ಪಿಡಿಒ ಕೂಡಲೇ ಖಾಸಗಿ ಕಾರ್ಖಾನೆಗೆಕಟ್ಟೆಯ ಮಣ್ಣನ್ನು ಸಾಗಿಸುವುದನ್ನು ನಿಲ್ಲಿಸಬೇಕು. ಕೂಲಿ ಕಾರ್ಮಿಕರಿಂದ ಕಾಮಗಾರಿ ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.