ADVERTISEMENT

ನವೆಂಬರ್‌ನಲ್ಲಿ ಹೊಸ ಆಸ್ಪತ್ರೆ ಉದ್ಘಾಟನೆ

ಜಿಲ್ಲಾಸ್ಪತ್ರೆ: ವೈದ್ಯಕೀಯ ಆಮ್ಲಜನಕ ಘಟಕ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 2:33 IST
Last Updated 29 ಸೆಪ್ಟೆಂಬರ್ 2022, 2:33 IST
ಕಾರ್ಯಕ್ರಮವನ್ನು ಸಚಿವ ಅಶ್ವತ್ಥನಾರಾಯಣ ಉದ್ಘಾಟಿಸಿದರು. ಪರಿಷತ್ ಸದಸ್ಯ ಅ. ದೇವೇಗೌಡ, ಜಿಲ್ಲಾಧಿಕಾರಿ ಅವಿನಾಶ ಮೆನನ್‌, ಜಿ.ಪಂ. ಸಿಇಒ ದಿಗ್ವಿಜಯ್ ಬೋಡ್ಕೆ , ತಿಪ್ಪೇಸ್ವಾಮಿ ಹಾಗೂ ಡಾ. ಜಿ.ಎಲ್. ಪದ್ಮಾ ಇದ್ದರು.
ಕಾರ್ಯಕ್ರಮವನ್ನು ಸಚಿವ ಅಶ್ವತ್ಥನಾರಾಯಣ ಉದ್ಘಾಟಿಸಿದರು. ಪರಿಷತ್ ಸದಸ್ಯ ಅ. ದೇವೇಗೌಡ, ಜಿಲ್ಲಾಧಿಕಾರಿ ಅವಿನಾಶ ಮೆನನ್‌, ಜಿ.ಪಂ. ಸಿಇಒ ದಿಗ್ವಿಜಯ್ ಬೋಡ್ಕೆ , ತಿಪ್ಪೇಸ್ವಾಮಿ ಹಾಗೂ ಡಾ. ಜಿ.ಎಲ್. ಪದ್ಮಾ ಇದ್ದರು.   

ರಾಮನಗರ: ಜಿಲ್ಲಾ ಕೇಂದ್ರದಲ್ಲಿ 600 ಹಾಸಿಗೆ ಸಾಮರ್ಥ್ಯದ ನೂತನ ಜಿಲ್ಲಾಸ್ಪತ್ರೆಯ ಕಾಮಾಗಾರಿಗಳು ಪೂರ್ಣಗೊಂಡಿದ್ದು, ನವೆಂಬರ್‌ನಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕೇಶವ ಕೃಪಾ ಸಂವರ್ಧನ ಸಮಿತಿ ಸಹಯೋಗದಲ್ಲಿ 250 ಎಲ್.ಎಂ.ಪಿ ವೈದ್ಯಕೀಯ ಆಮ್ಲಜನಕ ತಯಾರಿಕಾ ಘಟಕದ ಹಸ್ತಾಂತರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನೂತನ ಜಿಲ್ಲಾಸ್ಪತ್ರೆಯು ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಒಳಗೊಂಡಿದೆ. ಕೋವಿಡ್ ಸಂದರ್ಭದಲ್ಲಿ ಬಹುದೊಡ್ಡ ಸಮಸ್ಯೆಗಳನ್ನು ಜಿಲ್ಲೆಯಲ್ಲಿನ ವೈದ್ಯರು ನಿಭಾಯಿಸಿದ್ದಾರೆ .ವೈದ್ಯರು ತಮ್ಮ ಪ್ರಾಣ ಲೆಕ್ಕಿಸದೆ ಕೋವಿಡ್ ವಿದುದ್ದ ಹೋರಾಡಿ ಇತರರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಶ್ಲಾಘಿಸಿದರು.

ADVERTISEMENT

ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಂತ 250 ಎಲ್. ಎಂ. ಪಿ ಆಮ್ಲಜನಕ ತಯಾರಿಕಾ ಘಟಕ ಹಸ್ತಾಂತರ ಗೊಂಡಿದ್ದು ಸಾಮಾಜಿಕ
ಸೇವೆ ಮಾಡುವ ಕೆಲಸವನ್ನು ಗಿವ್ ಇಂಡಿಯಾ ನೆರವು ನೀಡಿದೆ. ಪ್ರತಿಯೊಬ್ಬರು ಸಾಮಾಜಿಕ ಕಳಕಳಿಯನ್ನು ಹೊಂದಿ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಅಬ್ಯುದಯ ಗಿವ್ ಇಂಡಿಯಾ ಮತ್ತು ಕೇಶವ ಕೃಪಾ ಸಂವರ್ಧನ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ ಅವರ ನೆರವು ಶ್ಲಾಘನೀಯ ಎಂದರು.

ವಿಧಾನ ಪರಿಷತ್ ಸದಸ್ಯ ಅ. ದೇವೇಗೌಡ, ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್, ಜಿ.ಪಂ. ಸಿಇಒ ದಿಗ್ವಿಜಯ್ ಬೋಡ್ಕೆ, ಎಸ್.ಪಿ ಸಂತೋಷ್ ಬಾಬು, ರೇಷ್ಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗೌತಮ್ ಗೌಡ ,ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಮಾಧು, ಡಿ.ಎಚ್.ಓ ಡಾ ಕಾಂತರಾಜ್, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ಜಿ.ಎಲ್. ಪದ್ಮಾ, ಆರ್.ಸಿ.ಎಚ್ ಅಧಿಕಾರಿ ಡಾ. ರಾಜು ಮತ್ತಿತರರು ಉಪಸ್ಥಿತರಿದ್ದರು.

ನಂತರ ಸಚಿವರು ರಾಮನಗರ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜಿಗೆ ಭೇಟಿ ನೀಡಿ, ಎನ್‌ಐಟಿ ಮಾದರಿಯಲ್ಲಿ ಕಾಲೇಜು ಅಭಿವೃದ್ಧಿ
ಕಾಮಗಾರಿಗಳನ್ನು ವೀಕ್ಷಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.