ADVERTISEMENT

ರಾಮನಗರ: ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2020, 4:14 IST
Last Updated 28 ಸೆಪ್ಟೆಂಬರ್ 2020, 4:14 IST
ಕರ್ನಾಟಕ ಬಂದ್‌ಗೆ ಜಿಲ್ಲೆಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕರ್ನಾಟಕ ಬಂದ್‌ಗೆ ಜಿಲ್ಲೆಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.   
""

ರಾಮನಗರ: ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಜಿಲ್ಲೆಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿದೆ. ಕೆಲವು ಅಂಗಡಿ-ಮುಂಗಟ್ಟು ಮುಚ್ಚಿವೆ. ಆದರೆ ಗ್ರಾಮೀಣ ಪ್ರದೇಶಗಳಿಗೆ ಬಸ್‌ಗಳು ಸಂಚರಿಸುತ್ತಿವೆ. ರೇಷ್ಮೆಗೂಡು ಮಾರುಕಟ್ಟೆಯಲ್ಲಿ ವಹಿವಾಟು ಎಂದಿನಂತೆ ಇದೆ. ಅಂಗಡಿಗಳನ್ನು ಮುಚ್ಚುವಂತೆ ರೈತ ಮುಖಂಡರು ಮನವಿ ಮಾಡುತ್ತಿದ್ದಾರೆ.

ಬಂದ್ ಬಂದೋಬಸ್ತ್‌ಗಾಗಿ 700 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಒಟ್ಟು 6 ಡಿಎಆರ್ ತುಕಡಿಗಳು ಪ್ರಮುಖ ವೃತ್ತಗಳಲ್ಲಿ ಕಣ್ಗಾವಲು ಇರಿಸಿವೆ.

ADVERTISEMENT

ರಾಮನಗರದ ಎಪಿಎಂಸಿ ವೃತ್ತದಿಂದ ಮೆರವಣಿಗೆ ಆರಂಭಗೊಂಡಿದ್ದು, ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಲು ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಸಿದ್ಧತೆ ನಡೆಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.