ರಾಮನಗರ: ರೇಷ್ಮೆಗೂಡಿನ ಬೆಲೆ ತೀವ್ರವಾಗಿ ಕುಸಿದಿದ್ದು, ಸರ್ಕಾರ ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿ ರೈತರು ಇಲ್ಲಿನ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ ಎದುರು ಬುಧವಾರ ಉಪವಾಸ ಸತ್ಯಾಗ್ರಹ ಆರಂಭಿಸಿದರು.
ಲಾಕ್‌ಡೌನ್‌ನಿಂದಾಗಿ ಗೂಡಿನ ಬೆಲೆ ತೀವ್ರವಾಗಿ ಕುಸಿದಿದೆ. ಹೀಗಾಗಿ ಸರ್ಕಾರವು ಗೂಡಿಗೆ ರಕ್ಷಣಾತ್ಮಕ ದರದ ಬದಲಾಗಿ ಪ್ರೋತ್ಸಾಹ ಧನ ನೀಡಬೇಕು. ಬಸವರಾಜು ಸಮಿತಿ ಶಿಫಾರಸುಗಳನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ರೇಷ್ಮೆ ಬೆಳೆಗಾರರ ಹಿತರಕ್ಷಣಾ ಸಮಿತಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ರೇಷ್ಮೆ ಬೆಳೆಗಾರರ ಸಂಘದ ಪದಾಧಿಕಾರಿಗಳು ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.