
ರಾಮನಗರ: ವಿಡಿಯೊ ಕಾನ್ಫರೆನ್ಸ್ ಮೂಲಕ ವಿಶೇಷ ಲೋಕ ಅದಾಲತ್‌ನಲ್ಲಿ ಹಲವು ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಸೆಷನ್ಸ್ ನ್ಯಾಯಾಧೀಶ ಅಧ್ಯಕ್ಷ ಎಂ.ಎಚ್.ಅಣ್ಣಯ್ಯ ಅಭಿಪ್ರಾಯಪಟ್ಟರು.
ಲೋಕ ಅದಾಲತ್‌ನಿಂದ ಜನರಿಗೆ ಹಣ ಮತ್ತು ಸಮಯ ಉಳಿತಾಯವಾಗುತ್ತಿದೆ. ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಕರಣಗಳ ವಿಚಾರಣೆಯಿಂದ ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲಕರವಾಗಿದೆ ಎಂದು ತಿಳಿಸಿದರು.
ಪಕ್ಷಗಾರರು ಅನಾರೋಗ್ಯ ಪೀಡಿತರಾಗಿದ್ದಲ್ಲಿ ಅಥವಾ ವಿದೇಶ ಮತ್ತು ಬೇರೆ ಊರುಗಳಲ್ಲಿ ನೆಲೆಸಿದ್ದರೆ ನ್ಯಾಯಾಲಯದಲ್ಲಿ ರಾಜಿ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ ಹಾಜರಾಗಲು ಸಾಧ್ಯವಾಗದಿದ್ದರೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಧಾನಕ್ಕೆ ಹಾಜರಾಗಬಹುದು ಎಂದರು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಎಂ.ಪಂಚಾಕ್ಷರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್. ಸವಿತಾ, ಜಿಲ್ಲಾ ಸರ್ಕಾರಿ ವಕೀಲ ಹರೀಶ್, ಫಿರ್ಯಾದುದಾರರ ವಕೀಲ ಕೆ.ಎಲ್.ಶಿವಕುಮಾರ್, ವಕೀಲ ಸುಬ್ಬಶಾಸ್ತ್ರಿ, ಆರ್.ವಿ.ದೇವರಾಜು, ವಕೀಲರು, ಸಾರ್ವಜನಿಕರು ಉಪಸ್ಥಿತರಿದ್ದರು.