ರಾಮನಗರ: ಯುವಕನಿಂದ ಚಾಕು ಇರಿತಕ್ಕೊಳಗಾಗಿ ಅಪಹರಣಕ್ಕೆ ಒಳಗಾದ ವಿದ್ಯಾರ್ಥಿನಿ ಸ್ಥಳೀಯ ರಾಮಕೃಷ್ಣ ಆಸ್ಪತ್ರೆಯಲ್ಲಿ ಪತ್ತೆಯಾಗಿದ್ದಾರೆ. ಕೃತ್ಯ ಎಸಗಿದ ಯುವಕನ ಗುರುತು ಪತ್ತೆಯಾಗಿದೆ.
ಘಟನೆ ಬಳಿಕ, ಯುವಕ ಅದೇ ಕಾರಿನಲ್ಲಿ ಯುವತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ದಾಖಲಿಸಿದ್ದಾನೆ. ವಿಷಯ ಗೊತ್ತಾಗುತ್ತಿದ್ದಂತೆ, ಪೊಲೀಸರು ಆಸ್ಪತ್ರೆಗೆ ತೆರಳಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆಸ್ಪತ್ರೆಯಲ್ಲಿರುವ ಯುವತಿ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಪ್ರೀತಿ ವಿಷಯ ಕಾರಣ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.