ಕುದೂರು (ಮಾಗಡಿ): ಶಿಕ್ಷಕರು ಬೋಧಿಸುವ ಪಠ್ಯ ವಿಷಯ ಆಲಿಸುವುದರ ಜತೆಗೆ ಶಿಸ್ತು ಮತ್ತು ಸಮಯಪಾಲನೆ ಅಳವಡಿಸಿಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಗಳಿಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಡಾ.ಡಿ.ಸಿ.ರಾಮಚಂದ್ರ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಬೆಂಗಳೂರು ನಾಲೆಡ್ಜ್ ಇನ್ವೆನ್ಷನ್ ಪಬ್ಲಿಷರ್ಸ್ ಅಂಡ್ ಡಿಸ್ಟ್ರಿಬ್ಯೂಟರ್ಸ್ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಪಠ್ಯಾಧಾರಿತ ಪುನಶ್ಚೇತನ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಂಸ್ಥೆ ವತಿಯಿಂದ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗುವುದು ಎಂದರು.
ಡಿಡಿಪಿಐ ಗಂಗಮಾರೇಗೌಡ ಮಾತನಾಡಿ, 2019–20ನೇ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ರಾಜ್ಯದಲ್ಲಿಯೇ ಫಲಿತಾಂಶದಲ್ಲಿ ಮೊದಲನೇ ಸ್ಥಾನ ಗಳಿಸಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದೇಶ್ವರ.ಎಸ್, ಮಾನವ ಸಂಪನ್ಮೂಲ ತರಬೇತುದಾರ ಅನಿಲ್ ಕುಮಾರ್ ಜೋಷಿ, ಸುನಿಲ್ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.