ADVERTISEMENT

5 ಕೆ.ಜಿ ಅಕ್ಕಿ ನೀಡಲು ಆಗ್ರಹ: ಸಂಸದ ಡಿ.ಕೆ. ಸುರೇಶ್

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 2:45 IST
Last Updated 27 ಏಪ್ರಿಲ್ 2021, 2:45 IST
ಡಿ.ಕೆ. ಸುರೇಶ್
ಡಿ.ಕೆ. ಸುರೇಶ್   

ರಾಮನಗರ: ಕೋವಿಡ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಿಪಿಎಲ್ ಕಾರ್ಡ್‍ದಾರರಿಗೆ ಸರ್ಕಾರ ಪ್ರತಿ ಯೂನಿಟ್‍ಗೆ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಕೋವಿಡ್ ವೈರಸ್ ಹಾವಳಿ ನಿಯಂತ್ರಣಕ್ಕೆ ರಾಜ್ಯ ಸರ್ಕಾರವು ಲಾಕ್‍ಡೌನ್ ಮತ್ತು ಕರ್ಫ್ಯೂನಂತಹ ಕ್ರಮ ಕೈಗೊಂಡಿದ್ದು, ಇದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಪ್ರತಿನಿತ್ಯದ ಆಹಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‍ಗಳಿಗೆ ತಿಂಗಳಿಗೆ ಪ್ರತಿ ಯೂನಿಟ್‍ಗೆ ತಲಾ 2 ಕೆಜಿ ಅಕ್ಕಿ ಹಾಗೂ 3ಕೆಜಿ ರಾಗಿ ವಿತರಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಘೋಷಣೆ ಮಾಡಿದಂತೆ ಪ್ರತಿ ಯೂನಿಟ್‍ಗೆ 5 ಕೆಜಿ ಅಕ್ಕಿಯನ್ನು ನಿಗದಿಗೊಳಿಸಿದೆ. ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರದ ನೆರವನ್ನು ಪಡೆದುಕೊಂಡು ಬಿಪಿಎಲ್ ಕಾರ್ಡ್ ಪ್ರತಿ ಯೂನಿಟ್‍ಗೆ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲು ಕ್ರಮವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT