
ಪ್ರಜಾವಾಣಿ ವಾರ್ತೆಸಾಂದರ್ಭಿಕ ಚಿತ್ರ
ರಾಮನಗರ: ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜ. 19ರಿಂದ ಫೆ. 2ರವರೆಗೆ ಸಮೀಪದ ವಸತಿ ಶಾಲೆಗಳಲ್ಲಿ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪಂಚಾಯಿತಿ ಭವನ, 2ನೇ ಮಹಡಿ, ಬಿ.ಎಂ. ರಸ್ತೆ, ಬೆಂಗಳೂರು ದಕ್ಷಿಣ ಜಿಲ್ಲೆ ಈ ಕಚೇರಿ ಸಂಪರ್ಕಿಸಬೇಕು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.