ADVERTISEMENT

ಶಿಕ್ಷಕರನ್ನು ಗೌರವದಿಂದ ಕಾಣಿ- ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2022, 5:53 IST
Last Updated 9 ಮಾರ್ಚ್ 2022, 5:53 IST
ಕೈಲಾಂಚ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಗ್ರಾ.ಪಂ. ವ್ಯಾಪ್ತಿಯ ಶಾಲೆಗಳ ಶಿಕ್ಷಕಿಯರನ್ನು ನಿಖಿಲ್‌ ಕುಮಾರಸ್ವಾಮಿ ಸನ್ಮಾನಿಸಿದರು
ಕೈಲಾಂಚ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ಗ್ರಾ.ಪಂ. ವ್ಯಾಪ್ತಿಯ ಶಾಲೆಗಳ ಶಿಕ್ಷಕಿಯರನ್ನು ನಿಖಿಲ್‌ ಕುಮಾರಸ್ವಾಮಿ ಸನ್ಮಾನಿಸಿದರು   

ರಾಮನಗರ: ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡುವುದರ ಜೊತೆಗೆ ಶಿಕ್ಷಕರಿಗೆ ಗೌರವ ನೀಡುವುದನ್ನು ರೂಢಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿಹೇಳಿದರು.

ತಾಲ್ಲೂಕಿನ ಕೈಲಾಂಚ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನವಚೇತನ ಚಾರಿಟಬಲ್ ಟ್ರಸ್ಟ್ ಫಾರ್ ಡಿಸೆಬಲ್ಸ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್‌ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ಶಾಲಾ ಹಂತದಲ್ಲಿ ಶ್ರದ್ಧೆ, ಭಕ್ತಿಯಿಂದ ವಿದ್ಯಾಭ್ಯಾಸ ಮಾಡಬೇಕು. ತಮಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ವಿದ್ಯಾದಾನ ಮಾಡುತ್ತಿರುವ ಶಿಕ್ಷಕರನ್ನು ಗೌರವದಿಂದ ಕಾಣಬೇಕು ಎಂದು ಹೇಳಿದರು.

ADVERTISEMENT

ನವಚೇತನ ಚಾರಿಟಬಲ್ ಸಂಸ್ಥೆಯ ಮಂಜುನಾಥ್ ಮಾತನಾಡಿ, ಸಂಸ್ಥೆಯಿಂದ ಇದುವರೆಗೆ 585 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸುಮಾರು 3 ಲಕ್ಷ 55 ಸಾವಿರ ನೋಟ್ ಬುಕ್‌ ವಿತರಿಸಲಾಗಿದೆ ಎಂದರು.

ಪ್ರೌಢಶಾಲಾ ಮುಖ್ಯಶಿಕ್ಷಕಿ ಗಾಯತ್ರಿದೇವಿ ಸೇರಿದಂತೆ ಕೈಲಾಂಚ ಗ್ರಾ.ಪಂ. ವ್ಯಾಪ್ತಿಯ ಶಾಲೆಗಳ ಶಿಕ್ಷಕಿಯರನ್ನು ಮಹಿಳಾ ದಿನಾಚರಣೆ ಅಂಗವಾಗಿ ಸನ್ಮಾನಿಸಲಾಯಿತು.

ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಸಿ. ರಾಜಣ್ಣ, ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ಆರ್. ಪಾಂಡುರಂಗ, ಬಿಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಪಿ. ಅಶ್ವಥ್, ಎಪಿಎಂಸಿ ಮಾಜಿ ಅಧ್ಯಕ್ಷ ದೊರೆಸ್ವಾಮಿ ಮಾತನಾಡಿದರು. ಸಿಆರ್‌ಪಿ ಮೃತ್ಯುಂಜಯ, ಗ್ರಾ.ಪಂ. ಸದಸ್ಯರಾದ ವೆಂಕಟೇಶ್, ಜಿ.ಪಿ. ಗಿರೀಶ್ ವಾಸು, ಅನಿತಾ, ಶಶಿ ರೇಣುಕಾ, ಚಲುವರಾಜು, ಶಿಕ್ಷಕರಾದ ಸತೀಶ್, ಶೇಖರ್, ವೆಂಕಟೇಶ್, ಕವಿತಾ ಇನಾಂದಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.