ರಾಮನಗರ: ‘ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಮತ್ತು ತಾಲ್ಲೂಕು ಘಟಕಕ್ಕೆ ಆಯ್ಕೆಯಾದ ಪದಾಧಿಕಾರಿಗಳಿಗೆ ತಾಲ್ಲೂಕಿನ ಅವ್ವೇರಳ್ಳಿಯ ರೇವಣಸಿದ್ದೇಶ್ವರ ಬೆಟ್ಟದ ದಾಸೋಹ ಮಠ ಮತ್ತು ರೇವಣಸಿದ್ದೇಶ್ವರ ಸ್ವಾಮಿ ದಾಸೋಹಮಠ ಅಭಿವೃದ್ದಿ ಸೇವಾ ಟ್ರಸ್ಟ್ ವತಿಯಿಂದ ಆಗಸ್ಟ್ 4ರಂದು ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಮಠದ ಕಿರಿಯ ಶ್ರೀಗಳಾದ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
‘ಸಮಾರಂಭದಲ್ಲಿ ಕನಕಪುರ ದೇಗುಲ ಮಠದ ಚನ್ನಬಸವ ಸ್ವಾಮೀಜಿ, ಮರಳೆ ಗವಿಮಠದ ಮುಮ್ಮಡಿ ಶಿವರುದ್ರ ಸ್ವಾಮೀಜಿ, ಅಂಕನಹಳ್ಳಿ ಮಠದ ಶಿವರುದ್ರ ಶಿವಾಚಾರ್ಯ ಸ್ವಾಮೀಜಿ, ಚನ್ನಪಟ್ಟಣ ವಿರಕ್ತ ಮಠದ ಶಿವರುದ್ರ ಸ್ವಾಮೀಜಿ, ಬೇವೂರು ಮಠಾಧೀಶ ಮೃತ್ಯುಂಜಯ ಸ್ವಾಮೀಜಿ, ಗುರುವಿನಪುರ ಮಠದ ಜಗದೀಶ ಶಿವಾಚಾರ್ಯ ಸ್ವಾಮೀಜಿ, ಬೆಟ್ಟಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ ಸೇರಿದಂತೆ ಜಿಲ್ಲೆಯ ಎಲ್ಲಾ ಮಠಗಳ ಶ್ರೀಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ’ ಎಂದು ಮಠದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ಅಖಿಲ ಭಾರತ ವೀರಶೈವ ಮಹಾಸಭಾ ಕೇಂದ್ರ ಸಮಿತಿ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಸಮಾಜದ ಹಿರಿಯರು ಸಹ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ನಂತರ ಅನ್ನ ಪ್ರಸಾದ ಮಾಡಲಾಗುವುದು’ ಎಂದರು.
ಕಾರ್ಯಕ್ರಮದ ಪ್ರಚಾರ ಕರಪತ್ರಗಳನ್ನು ಶ್ರೀಗಳು ಮತ್ತು ಗಣ್ಯರು ಬಿಡುಗಡೆಗೊಳಿಸಿದರು. ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಎಸ್. ಯೋಗಾನಂದ, ತಾಲ್ಲೂಕು ಅಧ್ಯಕ್ಷ ಪೊಲೀಸ್ ಶಂಕರಪ್ಪ, ಟ್ರಸ್ಟ್ ಅಧ್ಯಕ್ಷ ಕೆ.ಎಸ್. ರಾಜಣ್ಣ, ಮುಖಂಡರಾದ ಕೆ.ಎಸ್. ಶಂಕರಯ್ಯ, ಎಂ.ಆರ್. ಶಿವಕುಮಾರ ಸ್ವಾಮಿ, ಐಜೂರು ಜಗದೀಶ್, ಶಂಕರಣ್ಣ, ಅಂಗಡಿ ನಾಗೇಶ್, ವಿಭೂತಿಕೆರೆ ಶಿವಲಿಂಗಯ್ಯ, ಎಂ. ಮಹೇಶ್, ಬೆಂಕಿ ಮಹದೇವ್, ಮನೋಹರ್, ಲೋಕೇಶ್, ರಾಜಶೇಖರ್, ಕೋಟಹಳ್ಳಿ ರವಿ, ಪ್ರಸಾದ್, ಬಸವರಾಜಶಾಸ್ತ್ರಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.