
ಪ್ರಜಾವಾಣಿ ವಾರ್ತೆ
ಕನಕಪುರ: ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸಂತ ಕವಿ ಸರ್ವಜ್ಞನ ಜಯಂತಿಯನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು.
ಗ್ರೇಡ್-2 ತಹಶೀಲ್ದಾರ್ ಎಚ್.ಶಿವಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸರ್ವಜ್ಞರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು, ಸರ್ವಜ್ಞ ತನ್ನ ವಚನದ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾನೆ ಎಂದರು.
ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂಗಿ ಗಿರಿಯಪ್ಪ ಮಾತನಾಡಿದರು. ಗಬ್ಬಾಡಿ ಕಾಡೇಗೌಡ, ಶಿವಲಿಂಗಯ್ಯ, ದೊಡ್ಡಸ್ವಾಮಿ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.