ADVERTISEMENT

ಕನಕಪುರ | ರಸ್ತೆ ಅಪಘಾತ: ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 2:25 IST
Last Updated 18 ಸೆಪ್ಟೆಂಬರ್ 2025, 2:25 IST
<div class="paragraphs"><p>ಸಾವು</p></div>

ಸಾವು

   

ಪ್ರಾತಿನಿಧಿಕ ಚಿತ್ರ

ಕನಕಪುರ: ಇಲ್ಲಿನ ವಾಣಿ ಚಿತ್ರಮಂದಿರದ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಮೃತಪಟ್ಟಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಈ ಸಂಬಂಧ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ADVERTISEMENT

ತಮಿಳುನಾಡು ಮೂಲದ ಮಣಿಕಂಠನ್ (35) ಮೃತಪಟ್ಟವರು. ಮಣಿಕಂಠನ್ ರಸ್ತೆ ದಾಟುವಾಗ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಮಣಿಕಂಠನ್ ಬಿದ್ದು ತಲೆಗೆ ತೀವ್ರ ಪೆಟ್ಟಾಗಿತ್ತು. ಅವರನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದಾಗ್ಯೂ, ಅವರು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯ ಸಂಬಂಧಿಕರ ಬಗ್ಗೆ ಸುಳಿವು ಸಿಗದ ಕಾರಣ ಶವವನ್ನು ದಯಾನಂದ ಸಾಗರ ಆಸ್ಪತ್ರೆಯಲ್ಲಿ ಇಡಲಾಗಿದೆ ಎಂದು ತಿಳಿಬಂದಿದೆ. 

ಮೃತನ ಸಂಬಂಧಿಕರು ಕನಕಪುರ ಸಂಚಾರ ಪೊಲೀಸ್ ಠಾಣೆ ಅಥವಾ ಪುರ ಠಾಣೆ ಪೊಲೀಸರನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. 

ಅಪಘಾತಕ್ಕೆ ಕಾರಣವಾದ ಬೈಕ್ ಸವಾರ ಮತ್ತು ಬೈಕ್ ಅನ್ನು ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.