ADVERTISEMENT

ಹಾರೋಹಳ್ಳಿ: ರೌಡಿಶೀಟರ್‌ಗಳ ಪರೇಡ್

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 4:50 IST
Last Updated 22 ಮಾರ್ಚ್ 2024, 4:50 IST
ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಕೃಷ್ಣ ಕುಮಾರ್ ನೇತೃತ್ವದಲ್ಲಿ ರೌಡಿ ಪರೇಡ್ ನಡೆಸಲಾಯಿತು.
ಹಾರೋಹಳ್ಳಿ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಕೃಷ್ಣ ಕುಮಾರ್ ನೇತೃತ್ವದಲ್ಲಿ ರೌಡಿ ಪರೇಡ್ ನಡೆಸಲಾಯಿತು.   

ಹಾರೋಹಳ್ಳಿ: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ರೌಡಿಶೀಟರ್‌ಗಳ ಪರೇಡ್ ನಡೆಸಲಾಯಿತು.

‘ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರೇಡ್‌ ನಡೆಸಿ, ಎಚ್ಚರಿಕೆ ನೀಡಲಾಗಿದೆ. ರೌಡಿಶೀಟರ್‌ಗಳ ಮೇಲೆ ನಿಗಾ ವಹಿಸಲಾಗಿದೆ’ ಎಂದು ಹಾರೋಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಕೃಷ್ಣಕುಮಾರ್ ತಿಳಿಸಿದರು. 

‘ನಡವಳಿಕೆ ಸರಿಯಾಗಿದ್ದರೆ ಒಳ್ಳೆಯದು. ಹಿಂದಿನಂತೆಯೇ ನಡೆದುಕೊಂಡರೆ ಪರಿಣಾಮ ನೆಟ್ಟಗಿರುವುದಿಲ್ಲ. ಶಾಂತಿ ಸೌಹಾರ್ದಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ’ ಎಂದು ರೌಡಿಗಳಿಗೆ ಎಚ್ಚರಿಕೆ ನೀಡಲಾಯಿತು.

ADVERTISEMENT

ಸಬ್ ಇನ್‌ಸ್ಪೆಕ್ಟರ್ ಉಷಾನಂದಿನಿ,  ಶಿವರಾಜು, ಶ್ರೀಕಾಂತ್ ಸೇರಿದಂತೆ ಇತರ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.