ADVERTISEMENT

ರಾಮನಗರ | ಆರ್‌ಎಸ್‌ಎಸ್‌ಗೆ ರಾಜಕೀಯ ಲೇಪ ಸಲ್ಲದು: ಎ. ಮಂಜುನಾಥ್

ಶತಮಾನೋತ್ಸವ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎ. ಮಂಜುನಾಥ್ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2025, 2:29 IST
Last Updated 7 ಅಕ್ಟೋಬರ್ 2025, 2:29 IST
ರಾಷ್ಟ್ರೀಯ ಸ್ವಯಂ ಸೇವಕ ಸಂಘವು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಬಿಡದಿಯಲ್ಲಿ ಹಮ್ಮಿಕೊಂಡಿದ್ದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಶಾಸಕರೂ ಆಗಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಎ. ಮಂಜುನಾಥ್ ಗಣ ವೇಷಧಾರಿಯಾಗಿ ಪಾಲ್ಗೊಂಡರು
ರಾಷ್ಟ್ರೀಯ ಸ್ವಯಂ ಸೇವಕ ಸಂಘವು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಬಿಡದಿಯಲ್ಲಿ ಹಮ್ಮಿಕೊಂಡಿದ್ದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಶಾಸಕರೂ ಆಗಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಎ. ಮಂಜುನಾಥ್ ಗಣ ವೇಷಧಾರಿಯಾಗಿ ಪಾಲ್ಗೊಂಡರು   

ರಾಮನಗರ (ಬಿಡದಿ): ‘ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ರಾಜಕೀಯ ಲೇಪ ಹಚ್ಚಲು ವಿರೋಧಿಗಳು ಕಾಯುತ್ತಿದ್ದಾರೆ. ಅದರಲ್ಲಿ ಯಾವುದೇ ಅರ್ಥವಿಲ್ಲ. ಸಂಘವನ್ನು ಹತ್ತಿಕ್ಕಬೇಕೆಂಬ ಆಲೋಚನೆಗಳು ಹೆಚ್ಚಾದರೂ, ಸಂಘವು ಅವೆಲ್ಲವನ್ನೂ ಮೀರಿ ನಿಂತಿದೆ. ವಿಶ್ವದಲ್ಲೇ ಅತಿ ದೊಡ್ಡ ಸಂಘಟನೆಯಾಗಿ ಬೆಳೆದಿದೆ’ ಎಂದು ಮಾಜಿ ಶಾಸಕರೂ ಆಗಿರುವ ಜೆಡಿಎಸ್ ಜಿಲ್ಲಾಧ್ಯಕ್ಷ ಎ. ಮಂಜುನಾಥ್ ಅಭಿಪ್ರಾಯಪಟ್ಟರು.

ಸಂಘದ ಶತಮಾನೋತ್ಸವದ ಪ್ರಯುಕ್ತ ಪಟ್ಟಣದ ಬಿಬಿಎಸ್ ವೃತ್ತದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಿಡದಿ ಮಂಡಲದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸಂಘವು ಶಕ್ತಿಯುತವಾಗಿದ್ದು, ಮುಂದಿನ ತಿಂಗಳಲ್ಲಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿದೆ’ ಎಂದರು.

‘ರಾಷ್ಟ್ರೀಯ ವಿಪತ್ತುಗಳು ಸಂಭವಿಸಿದಾಗ ಸಂಘದ ಸದಸ್ಯರು ಸ್ವಯಂಪ್ರೇರಿತವಾಗಿ ಕೆಲಸ ಮಾಡುವ ಮೂಲಕ ಸೇವಾ ಮನೋಭಾವ ಮೆರೆಯುತ್ತಾ ಬಂದಿದ್ದಾರೆ. ದೇಶದ ಹಿತದೃಷ್ಟಿಯಿಂದ ಸಂಘವು ಮಾಡುತ್ತಿರುವ ಕೆಲಸಗಳು ಶ್ಲಾಘನೀಯವಾಗಿವೆ. ಮನುಷ್ಯನ ಹುಟ್ಟು ಸಾವಿನ ನಡುವೆ ಸೇವಾ ಮನೋಭಾವ ಬೆಳೆಸುವ ಕೆಲಸವನ್ನ ಸಂಘ ಮಾಡಿಕೊಂಡು ಬಂದಿದೆ. ಸಂಘದ ತತ್ವಗಳನ್ನು ಎಲ್ಲರೂ ಮೈ ಗೂಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಸಂಘದ ಪ್ರಾಂತ ಪ್ರಚಾರಕ ಗುರುಪ್ರಸಾದ್ ಜೀ ಮಾತನಾಡಿ, ‘ವಿಜಯದಶಮಿ ದಿನದಂದೇ ಸಂಘವು ನೂರು ವರ್ಷಗಳನ್ನು ಪೂರೈಸಿರುವುದು ಸಂತಸದ ವಿಷಯವಾಗಿದೆ. ಈ ಸಂಭ್ರಮದ ಅಂಗವಾಗಿ ಮುಂದೆ ಜಿಲ್ಲೆಯ ವಿವಿಧೆಡೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸಂಘದ ಮಹತ್ವ ಹಾಗೂ ಅದರ ಕಾರ್ಯಚಟುವಟಿಕೆಗಳನ್ನು ತಿಳಿಸಲಾಗುವುದು’ ಎಂದು ಹೇಳಿದರು.

200ಕ್ಕು ಹೆಚ್ಚು ಸ್ವಯಂಸೇವಕರು ಗಣವೇಷಧಾರಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.