ADVERTISEMENT

ಕಾಯಕ ತತ್ವ ಪುನರುಚ್ಚರಿಸಿದ ಸೇವಾಲಾಲ್

ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಡಾ. ರಾಜು ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 16:09 IST
Last Updated 21 ಫೆಬ್ರುವರಿ 2025, 16:09 IST
<div class="paragraphs"><p>ರಾಮನಗರದ ಕಂದಾಯ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇತ್ತೀಚೆಗೆ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ನಡೆಯಿತು.</p></div>

ರಾಮನಗರದ ಕಂದಾಯ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇತ್ತೀಚೆಗೆ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ನಡೆಯಿತು.

   

ರಾಮನಗರ: ‘ಹನ್ನೆರಡನೇ ಶತಮಾನದ ಬಸವಣ್ಣನವರ ಕಾಯಕತತ್ವವನ್ನು ಸಂತ ಸೇವಾಲಾಲ್ ಅವರು ಪುನರುಚ್ಚರಿಸಿದ್ದರು. ದಾವಣಗೆರೆ ಜಿಲ್ಲೆಯ ನ್ಯಾಮತಿನಲ್ಲಿ ಜನಿಸಿದ ಅವರು, ಕಾಡಿನಲ್ಲಿ ಅಸಂಘಟತವಾಗಿ ವಾಸಿಸುತ್ತಿದ್ದ ಜನರಿಗೆ ನೆಲೆ ದೊರಕಿಸಿಕೊಡಲು ಹೋರಾಟ ಸಂಘಟಿಸಿದರು’ ಎಂದು ರಾಮನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ರಾಜು ಗುಂಡಾಪುರ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಂದಾಯ ಭವನದಲ್ಲಿರುವ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ADVERTISEMENT

‘ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಲಂಬಾಣಿ ಸಮುದಾಯವು ಹೆಸರುವಾಸಿಯಾಗಿದೆ. ಜಾನಪದ ಕ್ಷೇತ್ರಕ್ಕೆ ಸಮುದಾಯವು ತನ್ನದೇ ಆದ ವಿಶಿಷ್ಟ ಕೊಡುಗೆಯನ್ನು ನೀಡಿದೆ. ಸಮುದಾಯ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ರಾಜಕೀಯ ಮುನ್ನಡೆ ಸಾಧಿಸಿ ಅಭಿವೃದ್ಧಿ ಹೊಂದಬೇಕು’ ಎಂದು ತಿಳಿಸಿದರು.

ಸಮುದಾಯದ ರಾಮಚಂದ್ರನಾಯ್ಕ ಮತ್ತು ಕೃಷ್ಣನಾಯ್ಕ ಅವರನ್ನು ಸನ್ಮಾನಿಸಲಾಯಿತು. ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿವೈಎಸ್ಪಿ ಕೆ.ಎನ್. ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಕುಂಬಾಪುರ ಬಾಬು, ಬಂಜಾರ ಸಮುದಾಯದ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ, ಮುಖಂಡರಾದ ಮುತ್ತು ನಾಯ್ಕ, ಸಿರಿ ನಾಯ್ಕ, ಮಾದೇಶ್ ನಾಯ್ಕ್, ಸತೀಶ್ ನಾಯ್ಕ, ಚಂದ್ರನಾಯ್ಕ, ರಾಜನಾಯ್ಕ ಹಾಗೂ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.