ಚನ್ನಪಟ್ಟಣ: ಬೆಳ್ಳಿತೆರೆಗೆ ನಟಿ ಬಿ.ಸರೋಜಾದೇವಿ ಕೊಡುಗೆ ಅಪಾರ. ಅವರ ನಿಧನದಿಂದ ಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ವಿಷಾದಿಸಿದರು.
ನಟಿ ಬಿ.ಸರೋಜಾದೇವಿ ಅವರ ನಿಧನಕ್ಕೆ ವೇದಿಕೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ದಶವಾರ ಗ್ರಾಮದಲ್ಲಿ ಹುಟ್ಟಿದ ನಟಿ ಬಿ.ಸರೋಜಾದೇವಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲಿ ಅಭಿನಯಿಸಿ ಚತುರ್ಭಾಷಾ ನಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇಂತಹ ಮಹಾನ್ ನಟಿಯ ಅಗಲಿಕೆ ಸಿನಿಮಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಎಂದು ಬೇಸರ ವ್ಯಕ್ತಪಡಿಸಿದರು.
ನಿವೃತ್ತ ಪ್ರಾಂಶುಪಾಲ ನಿಂಗೇಗೌಡ ಮಾತನಾಡಿ, ನಟಿ ಬಿ.ಸರೋಜಾದೇವಿ ಅವರು ತಾಲ್ಲೂಕಿನ ಮಗಳಾಗಿ ದಕ್ಷಿಣ ಭಾರತದ ಖ್ಯಾತ ನಟಿಯಾಗಿ ಹೆಸರು ಮಾಡಿದ್ದಾರೆ ಎಂದರು.
ಗಾಯಕ ಚೌ.ಪು.ಸ್ವಾಮಿ, ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಯೋಗೇಶ್ ಗೌಡ, ನಿವೃತ್ತ ಸಿಡಿಪಿಒ ಪುಟ್ಟಸ್ವಾಮಿ, ಬೈರಾಪಟ್ಟಣ ಮಂಜು, ನಿವೃತ್ತ ಶಿಕ್ಷಕ ಪುಟ್ಟಪ್ಪಾಜಿ, ಮರಿಅಂಕೇಗೌಡ, ರ್‍ಯಾಂಬೋ ಸೂರಿ, ಮೆಣಸಿಗನಹಳ್ಳಿ ರಾಮಕೃಷ್ಣಪ್ಪ. ಮಂಗಳವಾರಪೇಟೆ ತಿಮ್ಮರಾಜು, ಮಂಗಳವಾರಪೇಟೆ ಕೃಷ್ಣಪ್ರಸಾದ್, ಶ್ರೀನಿವಾಸ್, ಸೈಯದ್, ರಾಜು, ಪುನೀತ್, ಇತರರು ಅಗಲಿದ ನಟಿಗೆ ಸಂತಾಪ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.