ಮಾಗಡಿ: ತಾಲ್ಲೂಕಿನ ಸಾತನೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ನಂದೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ನಂದೀಶ್ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆ ಚುನಾವಣಾಧಿಕಾರಿ ನಂದೀಶ್ ಅವರನ್ನೇ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ಬೆಂಬಲಿತರು ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ತಾ.ಪಂ.ಮಾಜಿ ಸದಸ್ಯ ಸುಮಾ ರಮೇಶ್, ಗ್ರಾ.ಪಂ.ಸದಸ್ಯರಾದ ಮಹದೇವಯ್ಯ, ಮಲ್ಲಿಕಾರ್ಜುನ್, ಜಯಮ್ಮ, ಶಿವಲಿಂಗಯ್ಯ, ಹೊನ್ನಮ್ಮ, ಮಂಗಳ, ಸರೋಜಮ್ಮ, ಮಂಜುನಾಥ್, ಗಂಗಮ್ಮ ಮುಖಂಡರಾದ ಸಾತನೂರು ವೆಂಕಟೇಶ್ ಸೇರಿದಂತೆ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.