ADVERTISEMENT

ಶಾಲಾ ಮಕ್ಕಳು ಪೌಷ್ಟಿಕ ಆಹಾರ ಸೇವಿಸಿ: ಸುರೇಶ್ ಬಾಬು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2022, 4:30 IST
Last Updated 17 ಫೆಬ್ರುವರಿ 2022, 4:30 IST

ರಾಮನಗರ: ಶಾಲೆಗಳಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸ್ವಚ್ಛತೆ ಬಗ್ಗೆ ಅವರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಎಸ್.ಬಿ.ಸಿ.ಸಿ. ಸಂಯೋಜಕ ಸುರೇಶ್ ಬಾಬು ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೈಲಾಂಚ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ದಾಸೇಗೌಡನದೊಡ್ಡಿ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದ ವೈಯಕ್ತಿಕ ಸ್ವಚ್ಛತೆ, ಪೌಷ್ಟಿಕ ಆಹಾರ ಸೇವನೆ, ಕೋವಿಡ್ ಸೋಂಕು ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗಂಗಾಧರ್ ಮಾತನಾಡಿ, ಪೌಷ್ಟಿಕ ಆಹಾರ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿ ರೋಗರುಜಿನಗಳಿಂದ ದೂರವಿರಬಹುದು. ಸ್ಥಳೀಯವಾಗಿ ದೊರೆಯುವ ಹಸಿರು ಸೊಪ್ಪು, ತರಕಾರಿ, ಹಣ್ಣು, ಶುದ್ಧವಾದ ಕುಡಿಯುವ ನೀರು ಸೇವಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಮುಖ್ಯಶಿಕ್ಷಕ ಚಿಕ್ಕಗುಂಡಯ್ಯ, ಸಿ.ಆರ್.ಪಿ ಗೌರೀಶ್, ಸ್ವಚ್ಛ ಭಾರತ್ ಸಂಯೋಜಕ ಸೀನಪ್ಪ, ಅಡುಗೆ ಸಿಬ್ಬಂದಿ ಹಾಗೂ ಮಕ್ಕಳು
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.