ADVERTISEMENT

ಶಾಲೆ ಪ್ರತಿಭಾವಂತರನ್ನು ತಯಾರು ಮಾಡುವ ಕಾರ್ಖಾನೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2019, 16:43 IST
Last Updated 20 ಜನವರಿ 2019, 16:43 IST
ಚನ್ನಪಟ್ಟಣದ ಡೇರಾ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಮಲ್ಲೇಶ್ ಮಾತನಾಡಿದರು
ಚನ್ನಪಟ್ಟಣದ ಡೇರಾ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಮಲ್ಲೇಶ್ ಮಾತನಾಡಿದರು   

ಚನ್ನಪಟ್ಟಣ: ಸರ್ಕಾರಿ ಶಾಲೆಗಳು ಪ್ರತಿಭಾವಂತರನ್ನು ತಯಾರು ಮಾಡುವ ಕಾರ್ಖಾನೆಗಳಿದ್ದಂತೆ ಎಂದು ಡಿವೈಎಸ್ಪಿ ಮಲ್ಲೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಸಾತನೂರು ಸರ್ಕಲ್‌ನಲ್ಲಿರುವ ಡೇರಾ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ‘ಫಲಿತಾಂಶ ಉತ್ತಮ ಪಡಿಸಲು ಮಾರ್ಗದರ್ಶನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಜ್ಞಾನಿಗಳು, ಐಎಎಸ್‌, ಐಪಿಎಸ್‌ ಹಾಗೂ ಉನ್ನತ ಮಟ್ಟದ ಅಧಿಕಾರಿಗಳಲ್ಲಿ ಬಹುಪಾಲು ಮಂದಿ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದವರು ಎಂದರು.

ADVERTISEMENT

‘ಕೇವಲ ವಿದ್ಯಾಭ್ಯಾಸ ಮಾಡುತ್ತೇವೆ ಎಂದು ಪುಸ್ತಕ ಹಿಡಿದರೆ ಸಾಲದು ಪುಸ್ತಕದಲ್ಲಿರುವ ಪ್ರತಿಯೊಂದು ಸಾಲುಗಳು ನಿಮ್ಮ ನೆನಪಿನ ಬುತ್ತಿಯಾಗಿರುವ ಮೆದುಳಿನಲ್ಲಿ ಸೇರಿಕೊಂಡಾಗ ಮಾತ್ರ ಯಾವುದೇ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ’ ಎಂದು ಸಲಹೆ ನೀಡಿದರು.

‘ಏಕಾಗ್ರತೆ, ಶ್ರದ್ಧೆ, ಆಸಕ್ತಿಯಿಂದ ವಿದ್ಯಾಭ್ಯಾಸ ಮಾಡಿ ಸರ್ಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲ ಎಂಬಂತೆ ಸಾಧಿಸಿ ತೋರಿಸಬೇಕು. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ಉತ್ತಮ ಜೀವನ ರೂಪಿಡಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಶಾಲೆಯ ಮುಖ್ಯಶಿಕ್ಷಕರು, ಶಿಕ್ಷಕ ವರ್ಗ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.