ADVERTISEMENT

ಚನ್ನಪಟ್ಟಣ | ಮಕ್ಕಳಲ್ಲಿರಲಿ ವೈಜ್ಞಾನಿಕ ಮನೋಭಾವ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 2:30 IST
Last Updated 17 ನವೆಂಬರ್ 2025, 2:30 IST
ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ತಹಶೀಲ್ದಾರ್ ಬಿ.ಎನ್.ಗಿರೀಶ್ ವೀಕ್ಷಿಸಿದರು. ಮುಖ್ಯಶಿಕ್ಷಕಿ ಕೌಶಲ್ಯ ಇದ್ದರು.
ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನವನ್ನು ತಹಶೀಲ್ದಾರ್ ಬಿ.ಎನ್.ಗಿರೀಶ್ ವೀಕ್ಷಿಸಿದರು. ಮುಖ್ಯಶಿಕ್ಷಕಿ ಕೌಶಲ್ಯ ಇದ್ದರು.   

ಚನ್ನಪಟ್ಟಣ: ತಾಲ್ಲೂಕಿನ ಬೈರಾಪಟ್ಟಣ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ 'ಕುತೂಹಲ' ಶೀರ್ಷಿಕೆ ಅಡಿ ಏರ್ಪಡಿಸಿದ್ದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ತಹಶೀಲ್ದಾರ್ ಬಿ.ಎನ್.ಗಿರೀಶ್ ಚಾಲನೆ ನೀಡಿದರು. ಮಕ್ಕಳು ಪ್ರದರ್ಶಿಸಿದ ವಿಜ್ಞಾನ ಮಾದರಿ ಎಲ್ಲರ ಗಮನ ಸೆಳೆದವು.

ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು. ಮೂಢನಂಬಿಕೆ ನಿವಾರಣೆ, ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋವೃತ್ತಿ ಅಭಿವೃದ್ಧಿಗೆ ವಸ್ತುಪ್ರದರ್ಶನ ನೆರವಾಗುತ್ತವೆ ಎಂದು ಅವರು ಹೇಳಿದರು.
  
ಸರ್ಕಾರಿ ಶಾಲೆಯ ಮಕ್ಕಳು ಕೀಳರಿಮೆಯಿಂದ ಹೊರಗೆ ಬರಬೇಕು. ವಿದ್ಯಾರ್ಥಿಗಳು ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗದೇ ತಂತ್ರಜ್ಞಾನ ಮತ್ತು ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿಜ್ಞಾನ ವಸ್ತುಪ್ರದರ್ಶನವು ಮಕ್ಕಳಲ್ಲಿ ಕುತೂಹಲ, ಕಲ್ಪನಾಶಕ್ತಿ ಮತ್ತು ಸೃಜನಶೀಲತೆಯನ್ನು ಉತ್ತೇಜಿಸುವ ಮಹತ್ವದ ವೇದಿಕೆ ಎಂದು ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಹೇಳಿದರು.

ಮಕ್ಕಳಲ್ಲಿ ವಿಜ್ಞಾನದ ಅರಿವು ಮತ್ತು ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ಪ್ರತಿ ವರ್ಷ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ  ಆಯೋಜಿಸಗುತ್ತಿದೆ ಎಂದು ಮುಖ್ಯಶಿಕ್ಷಕಿ ಕೌಶಲ್ಯ ಹೇಳಿದರು.

ಶಿಕ್ಷಕರಾದ ರಾಘವೇಂದ್ರಮಯ್ಯ, ರಾಜಶೇಖರ ಇಟಗಿ, ಸವಿತಾ, ವಿನಯ್ ಕುಮಾರ್, ಅಶ್ವಿನಿ, ಆಶಾ, ಭಾರತಿ, ಲಕ್ಷ್ಮಿ ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT