ಬಿಡದಿ: ಹೋಬಳಿಯ ಕಂಚುಗಾರನಹಳ್ಳಿ ಗ್ರಾಮದ ಲೋಕೇಶ್ ಎಂಬುವರ ಮನೆಯ ಮುಂದೆ ನಿಲ್ಲಿಸಿದ್ದ ಸ್ಕೂಟರ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಠಾಣೆ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ.
ಪೃಥ್ವಿನ್ ಕುಲಕರ್ಣಿ ಮತ್ತು ಮನೋಜ್ ಕುಮಾರ್ ಬಂಧಿತರು. ಆರೋಪಿಗಳಿಂದ ₹3 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರ ಬಂಧನದಿಂದ ವಿವಿಧೆಡೆ ದಾಖಲಾಗಿದ್ದ 6 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಆರೋಪಿಗಳ ಪತ್ತೆಗೆ ಇನ್‌ಸ್ಪೆಕ್ಟರ್ ಜಿ.ಕೆ. ಶಂಕರ್ ನಾಯಕ್ ಮಾರ್ಗದರ್ಶನದಲ್ಲಿ ಪಿಎಸ್‌ಐಗಳಾದ ನರಸಿಂಹಮೂರ್ತಿ, ಕೇಶವಮೂರ್ತಿ ಹಾಗೂ ಸಿಬ್ಬಂದಿ ಬಂಧನ ಕಾರ್ಯಾಚರಣೆಯ ತಂಡದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.