ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಐನೋರ ಗೊಲ್ಲಹಳ್ಳಿ ಲಿಖಿತ ಶಿವು ರಾಜ್ಯಮಟ್ಟದ ಮಹಿಳಾ ಬೇಸ್‌ಬಾಲ್ ಪಂದ್ಯಾವಳಿಯಲ್ಲಿ ಮೊದಲ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಬೆಂಗಳೂರು 'ಡಾನ್ ಬಾಸ್ಕೊ ಎಂಜಿನಿಯರಿಂಗ್’ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ‘ವಿಶ್ವೇಶ್ವರಯ್ಯ ಟೆಕ್ನಾಲಜಿಕಲ್ ಯೂನಿವರ್ಸಿಟಿ’ ನಡೆಸಿದ ರಾಜ್ಯಮಟ್ಟದ ಮಹಿಳೆಯರ ಬೇಸ್‌ಬಾಲ್ ಪಂದ್ಯಾವಳಿಯಲ್ಲಿ ಬೆಂಗಳೂರು ಜಿಲ್ಲೆಯನ್ನು ಪ್ರತಿನಿಧಿಸಿದ್ದರು.
ಜುಲೈ 4ರಿಂದ 7ರವರೆಗೆ ನಡೆದ ಪಂದ್ಯಾವಳಿಯಲ್ಲಿ ಲಿಖಿತ ಶಿವು ಪ್ರಥಮ ಸ್ಥಾನ ಪಡದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.